ರಾಜ್ಯದಲ್ಲಿ ಒಂದು ದಿನವೂ ಕೋವಿಡ್ ಲಸಿಕಾ ಅಭಿಯಾನ ಸ್ಥಗಿತಗೊಂಡಿಲ್ಲ: ಸಚಿವ ಸುಧಾಕರ್ | ಜನತಾ ನ್ಯೂಸ್

29 Jun 2021
376

ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಒಂದು ದಿನವೂ ಲಸಿಕಾಕರಣ ಸ್ಥಗಿತಗೊಂಡಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಮವಾರ ಅಥವಾ ಮಂಗಳವಾರ ದೆಹಲಿಗೆ ಪ್ರವಾಸ ಹೋಗಲಿದ್ದು, ಆ ವೇಳೆ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಚರ್ಚಿಸಲಾಗುವುದು. ಕೇಂದ್ರ ಆರೋಗ್ಯ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ, ರಾಜ್ಯಕ್ಕೆ ಹೆಚ್ಚು ಲಸಿಕೆ ಪೂರೈಸಲು ಮನವಿ ಮಾಡಲಾಗುವುದು. ಆದರೆ ರಾಜ್ಯದಲ್ಲಿ ಲಸಿಕೆಯೇ ಇಲ್ಲ ಎಂದು ಎಲ್ಲೂ ಹೇಳಿಲ್ಲ.

ಒಂದು ದಿನವೂ ಲಸಿಕೆ ಕೊರತೆಯಿಂದ ಲಸಿಕಾಕರಣ ಸ್ಥಗಿತಗೊಂಡಿಲ್ಲ. ಪ್ರತಿ ದಿನ 2 ರಿಂದ 3 ಲಕ್ಷ ಲಸಿಕೆ ನೀಡಲಾಗುತ್ತಿದೆ. ಸುಮಾರು 5 ಲಕ್ಷ ಲಸಿಕೆ ರಾಜ್ಯದಲ್ಲಿ ದಾಸ್ತಾನು ಇದೆ. ಕೇಂದ್ರದಿಂದ ಲಸಿಕೆ ಬಂದ ಕೂಡಲೇ ಹಂಚಿಕೆ ಮಾಡಲಾಗುತ್ತದೆ ಎಂದರು.

ಮೈಸೂರಿನಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಆದರೆ ಮರಣ ಪ್ರಮಾಣ 3.85% ಇದೆ. ಇದಕ್ಕಾಗಿ ಡೆತ್ ಆಡಿಟ್ ಮಾಡಲಾಗುತ್ತಿದೆ.

ದೊಡ್ಡ ಆಸ್ಪತ್ರೆಗಳಲ್ಲಿ ತಂಡ ರಚಿಸಿ ಡೆತ್ ಆಡಿಟ್ ಮಾಡಲು ಸೂಚಿಸಲಾಗಿದೆ. ಪಿರಿಯಾಪಟ್ಟಣ ಹಾಗೂ ಬನ್ನೂರಿನಲ್ಲಿ ಹಾಟ್ ಸ್ಪಾಟ್ ಇದ್ದು, ಅಲ್ಲಿ ಕಂಟೇನ್ ಮೆಂಟ್ ವಲಯವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುರುತಿಸಿದ 20 ಹಾಟ್ ಸ್ಪಾಟ್‍ಗಳಲ್ಲಿ ಮೂರು ಮೈಸೂರು ಜಿಲ್ಲೆಗೆ ಸೇರಿದೆ. ಆಸ್ಪತ್ರೆ ಕಾವಲ್, ಹನಗೋಡು, ಸಿಎಲ್ ಡಿ ಯಲ್ಲಿ ಕಂಟೇನ್ ಮೆಂಟ್ ವಲಯ ಮಾಡಬೇಕೆಂದು ಸೂಚಿಸಲಾಗಿದೆ. 11 ತಜ್ಞರು ಹಾಗೂ 31 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಜಿಲ್ಲೆಗೆ ನೀಡಿ ಖಾಲಿ ಹುದ್ದೆ ತುಂಬಲಾಗಿದೆ.

ಜೊತೆಗೆ ಒಂದು ವರ್ಷ ಸರಕಾರಿ ಕಾರ್ಯನಿರ್ವಹಿಸುವ ಎಂಬಿಬಿಎಸ್ ವೈದ್ಯರ ನೇಮಕಾತಿ ಪೈಕಿ 174 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯ ಎಲ್ಲ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಈ ವೈದ್ಯರು ಕೆಲಸ ಮಾಡಲಿದ್ದಾರೆ. ಮಕ್ಕಳ ವಿಭಾಗದ ಐಸಿಯು ಬಗ್ಗೆ ಇವರಿಗೆ ತರಬೇತಿ ನೀಡಲಾಗುತ್ತದೆ. ಸಂಭವನೀಯ ಮೂರನೇ ಅಲೆ ಬಂದಾಗ ಮಕ್ಕಳಿಗೆ ಹೆಚ್ಚು ಸೋಂಕು ಬಂದರೆ, ಅವರಿಗೆ ಸೂಕ್ತ ಚಿಕಿತ್ಸೆ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.

RELATED TOPICS:
English summary :Sudhakar

ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಅಫ್ಘಾನಿಸ್ತಾನ ಜನರ ಲಾಭಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ - ನವದೆಹಲಿಯಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಹೇಳಿಕೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#

ನ್ಯೂಸ್ MORE NEWS...