Sat,Apr27,2024
ಕನ್ನಡ / English

ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ: ರಿಯಲ್ ಎಸ್ಟೇಟ್‌ ಉದ್ಯಮಿ ಪ್ರಭಾಕರ್ ರೆಡ್ಡಿ | ಜನತಾ ನ್ಯೂಸ್

30 Jun 2021
1317

ಬೆಂಗಳೂರು : ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವದಂತಿ ಹಬ್ಬಿದೆ. ಅದನ್ನು ನಂಬಬೇಡಿ ಎಂದು ರಿಯಲ್ ಎಸ್ಟೇಟ್‌ ಉದ್ಯಮಿ ಪ್ರಭಾಕರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಮಂಗಳವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿದ್ದು, ಇದು ಸುಳ್ಳು ಸುದ್ದಿ ಎಂದು ಸ್ವತಃ ಪ್ರಭಾಕರ್​ ರೆಡ್ಡಿ ಅವರೇ ಆಸ್ಪತ್ರೆಯಲ್ಲಿ ಕುಳಿತು ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ.

ರಾಜರಾಜೇಶ್ವರಿನಗರದ ತಮ್ಮ ನಿವಾಸದಲ್ಲಿ ಶೌಚಗೃಹ ಶುಚಿಗೊಳಿಸುವ ಪಿನಾಯಿಲ್ ಕುಡಿದು ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಸ್ಪರ್ಶ ಆಸ್ಪತ್ರೆಗೆ ಪತ್ನಿ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಇದನ್ನು ಅಲ್ಲಗೆಳೆದಿರುವ ಪ್ರಭಾಕರ್​ ರೆಡ್ಡಿ, ಈ ಸಂಬಂಧ ಆಸ್ಪತ್ರೆಯಿಂದಲೇ ವಿಡಿಯೊ ಮೂಲಕ ಪ್ರತಿಕ್ರಿಯಿಸಿದ್ದಾರೆ.

ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ನನಗೆ ಕೋವಿಡ್‌ ಸೋಂಕು ತಗುಲಿತ್ತು. ಬಳಿಕ ಮೊನ್ನೆ ನಡೆದ ದಿನಸಿ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಶ್ವಾಸಕೋಶ ಮತ್ತು ಗಂಟಲಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯ ವಾರ್ಡ್‌ನಲ್ಲೇ ಇದ್ದು, ಯಾವುದೇ ಸಮಸ್ಯೆ ಇಲ್ಲ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...