ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ, ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ: ಬಿ.ವೈ. ವಿಜಯೇಂದ್ರ | ಜನತಾ ನ್ಯೂಸ್

30 Jun 2021
405

ಮೈಸೂರು : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ, ಇನ್ನೆರಡು ವರ್ಷಗಳವರೆಗೆ ಬಿ ಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ. ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ.ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.

ಯಡಿಯೂರಪ್ಪನವರೇ ಮುಂದಿನ ಎರಡು ವರ್ಷಗಳವರೆಗೂ ಮುಖ್ಯಮಂತ್ರಿಗಳಾಗಿರುತ್ತಾರೆ, ಇದನ್ನು ರಾಷ್ಟ್ರ ನಾಯಕರೇ ಸ್ಪಷ್ಟಪಡಿಸಿದ್ದಾರೆ, ಹಾಗಾಗಿ ಈ ಬಗ್ಗೆ ಚರ್ಚೆ ಅನಗತ್ಯ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೋವಿಡ್ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು

ನಾನು ಚುನಾವಣೆಗೆ ನಿಲ್ಲಬೇಕೋ ಬೇಡ್ವೋ ನಿಲ್ಲುವುದಾದರೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದು ಎರಡು ವರ್ಷದ ನಂತರ ತೀರ್ಮಾನವಾಗುತ್ತದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರೋದು ನಿಜ ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಪಕ್ಷವಯಿಸಿರೋ ಜವಾಬ್ದಾರಿ ಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದರು.

RELATED TOPICS:
English summary :Vijayendra

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...