Sat,Apr27,2024
ಕನ್ನಡ / English

ಸುಧರ್ಮ ಸಂಸ್ಕೃತ ಪತ್ರಿಕೆಯ ಸಂಪಾದಕ ಕೆ.ವಿ.ಸಂಪತ್ ಕುಮಾರ್ ಇನ್ನಿಲ್ಲ | ಜನತಾ ನ್ಯೂಸ್

30 Jun 2021
2411

ಮೈಸೂರು : ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎನಿಸಿದ್ದ "ಸುಧರ್ಮ" ಸಂಸ್ಕೃತ ಪತ್ರಿಕೆಯ ಸಂಪಾದಕ ಕೆ.ವಿ.ಸಂಪತ್ ಕುಮಾರ್ (64) ಹೃದಯಾಘಾತದಿಂದ ನಿಧನರಾದರು.

ದೇಶ ಮತ್ತು ವಿದೇಶದಲ್ಲಿ ಸಂಸ್ಕೃತ ಜನಪ್ರಿಯಗೊಳಿಸುವಲ್ಲಿ, ಜನರ ಹೃದಯಕ್ಕೆ ಹತ್ತಿರವಾಗಿಸುವಲ್ಲಿ ಕಳೆದ 5 ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದ ಸುಧರ್ಮ ಸಂಸ್ಕೃತ ಪತ್ರಿಕೆಯ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಮೈಸೂರಿನಲ್ಲಿಂದು ನಿಧನ ಹೊಂದಿದರು.

ಮೃತರ ಅಂತ್ಯಕ್ರಿಯೆಯು ಸಂಜೆ ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ನೆರವೇರಲಿದೆ. ತಂದೆ ನಾಡದೂರ್ ವರದರಾಜ್ ಅಯ್ಯಂಗಾರ್, ತಾಯಿ ಸೀತಾಲಕ್ಷ್ಮೀ.
ಪಂಡಿತ್ ವರದರಾಜ ಅಯ್ಯಂಗಾರ್ ಈ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸಂಸ್ಕೃತ ವಿದ್ವಾಂಸರೂ ಆಗಿರುವ ಇವರು 1945ರಲ್ಲಿ ಈ ಮುದ್ರಣಾಲಯ ಪ್ರಾರಂಭಿಸಿದ್ದು ಇಲ್ಲಿ ಪುಸ್ತಕಗಳು, ಸರ್ಕಾರಿ ಗೆಜೆಟ್ ಗಳು, ಸಂಸ್ಕೃತ ಮತ್ತು ಕನ್ನಡದಲ್ಲಿ ಪ್ರಶ್ನೆ ಪತ್ರಿಕೆಗಳು ಸಹ ಮುದ್ರಿತವಾಗಿದ್ದವು.

ಸಂಪತ್‌ಕುಮಾರ್ ಅವರ ತಂದೆ ಪಂಡಿತ್ ವರದರಾಜ ಅಯ್ಯಂಗಾರ್ ಅವರು 1945ರಲ್ಲಿ ಸುಧರ್ಮ ಮುದ್ರಣಾಲಯ ಪ್ರಾರಂಭಿಸಿ, 1970ರಲ್ಲಿ ಸುಧರ್ಮ ಪತ್ರಿಕೆಯನ್ನು ಹೊರತರಲಾರಂಭಿಸಿದರು. ಇವರ ನಿಧನದ ನಂತರ ಪತ್ರಿಕೆಯ ಜವಾಬ್ದಾರಿಯನ್ನು ವಹಿಸಿಕೊಂಡ ಸಂಪತ್‌ಕುಮಾರ್ ಪತ್ರಿಕೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡರು. ಪತ್ರಿಕೆಯ ಆನ್‌ಲೈನ್‌ ಆವೃತ್ತಿಯನ್ನೂ ಇವರು ಹೊರತಂದರು. ಜತೆಗೆ, ಸಂಸ್ಕೃತ ದಿನದರ್ಶಿಯನ್ನೂ ಪ್ರಕಟಿಸಿದರು.

ಸಂಸ್ಕೃತ ಭಾಷೆಯಲ್ಲಿ 50 ವರ್ಷಗಳಿಂದ ಮೈಸೂರಿನಿಂದ ಪ್ರಕಟವಾಗುತ್ತಿರುವ "ಸುಧರ್ಮ" ದಿನಪತ್ರಿಕೆಯನ್ನು ಪರಿಗಣಿಸಿ 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಕೆ.ವಿ.ಸಂಪತ್ ಕುಮಾರ್- ಕೆ.ಎಸ್.ಜಯಲಕ್ಷ್ಮೀ ದಂಪತಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಿತ್ತು. ಇದರ ಜತೆಗೆ, ಸಿದ್ಧಾರೂಢ ಪ್ರಶಸ್ತಿ, ಶಿವರಾತ್ರಿ ದೇಶಿಕೇಂದ್ರ ಮಾಧ್ಯಮ ಪ್ರಶಸ್ತಿ, ಅಬ್ದುಲ್ ಕಲಾಂ ಪ್ರಶಸ್ತಿಗಳೂ ಇವರಿಗೆ ಲಭಿಸಿವೆ.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...