Fri,Apr26,2024
ಕನ್ನಡ / English

ಮೆಡಿಕಲ್ ಕಾಲೇಜು ಬಸ್ - ಬೈಕ್ ನಡುವೆ ಅಪಘಾತ: ನಾಲ್ವರಿಗೆ ಗಾಯ, ತಪ್ಪಿದ ಭಾರೀ ಅನಾಹುತ | ಜನತಾ ನ್ಯೂಸ್

02 Jul 2021
1977

ಮಂಗಳೂರು : ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮಂಗಳೂರು ಅತ್ತಾವರ ಖಾಸಗಿ ಆಸ್ಪತ್ರೆಗೆ ಸೇರಿದ ಬಸ್ಸಿನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಸಿಬಂದಿಗಳನ್ನು ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ವಾಲಿನಿಂತಿದೆ.

ಬಸ್ಸಿನಲ್ಲಿ ಸುಮಾರು 13 ಜನರಿದ್ದು, ಮಂಗಳೂರು ಕಡೆಗೆ ಮಂಗಳಪದವು, ಅನಂತಾಡಿ, ಮಾಣಿ ಕಡೆಯ ಸ್ಟಾಪ್ ನರ್ಸ್ ಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಮೂವರು ಸ್ಟಾಫ್ ನರ್ಸ್ ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಬೈಕ್ ಸವಾರ ಇರಂದೂರು ಪಡೀಲ್ ನಿವಾಸಿ ಝಾಕೀರ್ ಎಂದು ಗುರುತಿಸಲಾಗಿದೆ. ಎಲ್ಲರನ್ನೂ ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಬಸ್ ರಸ್ತೆ ಬದಿಯ ಮರದ ಬುಡದಲ್ಲಿ ಸಿಕ್ಕಿ ಹಾಕಿಕೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಪಕ್ಕದಲ್ಲಿ ಪ್ರಪಾತ ಇದ್ದು, ಮಹಿಳೆಯೊಬ್ಬರು ಕೆಳಗಡೆ ಉರುಳಿ ಬಿದ್ದಿದ್ದಾರೆ ಎನ್ನಲಾಗಿದೆ.

RELATED TOPICS:
English summary :Mangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...