Fri,Apr26,2024
ಕನ್ನಡ / English

ಗೋವಾದಲ್ಲಿ ಕನ್ನಡಿಗರ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ, ಕನ್ನಡಿಗರ ಸುರಕ್ಷತೆಗೆ ಕ್ರಮ ತೊಗೊಳ್ಳಿ: ಹೆಚ್​​​.ಡಿ ಕುಮಾರಸ್ವಾಮಿ | ಜನತಾ ನ್ಯೂಸ್

02 Jul 2021
1162

ಬೆಂಗಳೂರು : ಗೋವಾದಲ್ಲಿ ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಮುದ್ದೇಬಿಹಾಳ ಮೂಲದ ಒಂದೇ ಕುಟುಂಬದ ಮೂವರು ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗೋವಾದಲ್ಲಿ ಕನ್ನಡಿಗರ ಬದುಕು ಎಂಥಾ ಡೋಲಾಯಮಾನ ಪರಿಸ್ಥಿತಿಯಲ್ಲಿದೆ, ಅಲ್ಲಿ ಕನ್ನಡಿಗರು ಎಂಥ ಅಪಾಯಕಾರಿ ಜೀವನ ನಡೆಸುತ್ತಿದ್ದಾರೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವೊಂದರಲ್ಲಿ ಕನ್ನಡಿಗ ಕುಟುಂಬಕ್ಕೆ ಗೋವಾದ ಪೊಲೀಸರು ಕಿರುಕುಳ ನೀಡಿದ್ದರು ಎಂಬುದು ಅವರ ಡೆತ್‌ನೋಟ್‌ನಲ್ಲೇ ಇದೆ ಎನ್ನಲಾಗಿದೆ. ಕಳ್ಳತನದಂಥ ಬಂಡ ಬಾಳು ಬದುಕಿದ್ದಿದ್ದರೆ ಆ ಕುಟುಂಬ ಆತ್ಮಹತ್ಯೆಯಂಥ ನಿರ್ಧಾರಕ್ಕೆ ಬರುತ್ತಿರಲಿಲ್ಲ. ಕನ್ನಡಿಗರೆಂಬ ಕಾರಣಕ್ಕೆ ಈ ಕುಟುಂಬದ ಮೇಲೆ ದೌರ್ಜನ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಮೂವರ ಆತ್ಮಹತ್ಯೆ ನಂತರ ಪೊಲೀಸರೂ ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ತರಾತುರಿಯಲ್ಲಿ ಪಂಚನಾಮೆ ನಡೆಸಿದ್ದಾರೆ ಎಂಬ ಆರೋಪ ಸ್ಥಳೀಯ ಕನ್ನಡ ಸಂಘಟನೆಗಳಿಂದ ವ್ಯಕ್ತವಾಗಿದೆ. ಈ ಬಗ್ಗೆ ಗೋವಾ ಮುಖ್ಯಮಂತ್ರಿ ಕೂಡಲೇ ಗಮನ ಹರಿಸಬೇಕು. ಪೊಲೀಸ್‌ ಕಿರುಕುಳದ ನಿಟ್ಟಿನಲ್ಲಿ ತನಿಖೆ ನಡೆಯಬೇಕು. ಈ ಮೂಲಕ ಕನ್ನಡಿಗರ ಸುರಕ್ಷತೆಯನ್ನು ಖಾತ್ರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

"ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಗಳಿಗೆ ಕೊನೆಮೊದಲಿಲ್ಲ ಎಂಬಂತಾಗಿದೆ. ಕನ್ನಡಿಗರನ್ನು ಒಕ್ಕಲೆಬ್ಬಿಸುವುದರಿಂದ ಆರಂಭಿಸಿ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ಸಿಲುಕಿಸುವವರೆಗೆ ವಿಧವಿಧದ ದೌರ್ಜನ್ಯಗಳು ನಡೆಯುತ್ತಲೇ ಇವೆ. ಈ ಬಗ್ಗೆ ಕರ್ನಾಟಕ ಸರ್ಕಾರವೂ ಗಮನಹರಿಸಬೇಕು. ನಾನೂ ಕೂಡ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ" ಎಂದಿದ್ದಾರೆ.

RELATED TOPICS:
English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...