Thu,Apr25,2024
ಕನ್ನಡ / English

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿಎಸ್​ವೈಗೆ ಮತ್ತೆ ಸಂಕಷ್ಟ | ಜನತಾ ನ್ಯೂಸ್

03 Jul 2021
1466

ಬೆಂಗಳೂರು : ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸರಿಯಾಗಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ನಗರದ ದೇವರಬೀಸನಹಳ್ಳಿಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು 10 ಸಾವಿರ ಪುಟಗಳ ಬಿ ರಿಪೋರ್ಟ್ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ಮುಂದುವರಿದ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತ ಡಿವೈಎಸ್‌ಪಿಗೆ ನ್ಯಾಯಾಲಯ ಸೂಚನೆ ನೀಡಿದ್ದಾರೆ. ಜತೆಗೆ ಹೈಕೋರ್ಟ್ ಆದೇಶ ಪರಿಗಣಿಸಿ ತನಿಖೆಯನ್ನು ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ಬಿ.ಎಸ್.ಯಡಿಯೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಲಾಗಿತ್ತು. 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. 2015ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಜನವರಿ 2021ರಲ್ಲಿ ಆರೋಪದಲ್ಲಿ ಹುರುಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಬಿ ರಿಪೋರ್ಟ್​ನ್ನು ತಿರಸ್ಕರಿಸಿದ ಕೋರ್ಟ್ ಪ್ರಕರಣದ ತನಿಖೆಗೆ ಆದೇಶ ನೀಡಿದೆ.

ಯಡಿಯೂರಪ್ಪ ಅವರು 2019ರ ಜ.25ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿ, ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ, ವಿಶೇಷ ನ್ಯಾಯಾಯಲ ದೂರನ್ನು ವಿಚಾರಣೆ ಅಂಗೀಕರಿಸಿರುವುದು ಕಾನೂನು ಬಾಹಿರ ಕ್ರಮ. ಹೀಗಾಗಿ, ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಆದರೆ, ಹೈಕೋರ್ಟ್ ಅರ್ಜಿ ವಜಾ ಮಾಡಿತ್ತಲ್ಲದೆ, ಸೂಕ್ತ ತನಿಖೆ ನಡೆಸದ ಲೊಕಾಯುಕ್ತ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

RELATED TOPICS:
English summary :BSYediyurappa

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...