3 ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ, 3ನೇ ಅಲೆಯಿಂದ ರಕ್ಷಿಸಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್

04 Jul 2021
413

ಬೆಂಗಳೂರು : ಮೂರು ತಿಂಗಳೊಳಗೆ ಶೇಕಡಾ 80 ರಷ್ಟು ಜನರಿಗೆ ಎರಡು ಡೋಸ್ ಲಸಿಕೆ ಹಾಕಿಸಿ, ಕೋವಿಡ್ 3 ನೇ ಅಲೆಯಿಂದ ಜನರನ್ನು ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ತಾಕೀತು ಮಾಡಲು ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೂರು ತಿಂಗಳೊಳಗೆ ರಾಜ್ಯದ ಶೇ.80 ರಷ್ಟು ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ, ಕೊರೊನಾ 3 ನೇ ಅಲೆಯಿಂದ ರಾಜ್ಯವನ್ನು ರಕ್ಷಿಸಬಹುದಾಗಿದೆ. ಅಕ್ಟೋಬರ್​ನಲ್ಲಿ ಕೊರೊನಾ 3ನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ರಷ್ಟು ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ 3ನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ಧವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸವಾಲು ಅಸಾಧ್ಯವಾದುದೇನೂ ಅಲ್ಲ. ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್‌ ಮಾಡಲು ಒತ್ತು ಕೊಡಬೇಕು ಎಂದವರು ಹೇಳಿದರು.

ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಹಾಕುವಲ್ಲಿ ಉತ್ತರ ಕರ್ನಾಟಕದ ಜನರನ್ನು ಮಲತಾಯಿ ಮಕ್ಕಳಂತೆ ನೋಡಲಾಗುತ್ತಿದೆ. ಬೆಂಗಳೂರು ನಗರದಲ್ಲೂ ಲಸಿಕೆ ದಾಸ್ತಾನು ಕೊರತೆಯಿದೆ. ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗಿಲ್ಲವಾದ ಕಾರಣ ದಿಲ್ಲಿಗೆ ಹೋಗುವುದಾಗಿ ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಈ ಸರ್ಕಾರ ಈಗಲಾದರೂ ಎಚ್ಚೆತ್ತು ಬದ್ದತೆಯಿಂದ ಕೆಲಸ ಮಾಡುತ್ತಾ ನೋಡೋಣ ಎಂದು ಶಿವಕುಮಾರ್ ಹೇಳಿದರು.

ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2 ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ ಎಂದು ಸಲಹೆ ಮಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರು ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನೇಷನ್‌ ಶಿಬಿರಗಳನ್ನು ನಡೆಸಿ, 1 ಲಕ್ಷ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದಾರೆ. ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅನುಮತಿ ಕೇಳಿದರೂ ಸರ್ಕಾರ ಕೊಡಲಿಲ್ಲ. ಈ ಉದ್ದೇಶಕ್ಕೆ ಶಾಸಕರ ನಿಧಿ ಬಳಸುವ ಸದಾಶಯಕ್ಕೆ ಸರ್ಕಾರ ಸಮ್ಮತಿಸಲಿಲ್ಲ. ನಮ್ಮ ಸಹಾಯ ಅಗತ್ಯವಿಲ್ಲ ಎಂದರೆ ತೊಂದರೆ ಇಲ್ಲ. ಕಾಲಮಿತಿಯಲ್ಲಿ ಸರ್ಕಾರ ತ್ವರಿತವಾಗಿ ಎಲ್ಲರಿಗೂ ಲಸಿಕೆ ಹಾಕಿಸಿ, ಜನರನ್ನು ರಕ್ಷಣೆ ಮಾಡಲಿ ಎಂದು ಶಿವಕುಮಾರ್ ಹೇಳಿದರು.

RELATED TOPICS:
English summary :DKShivakumar

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...