ನಮ್ಮ ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ: ಯೋಗೇಶ್ವರ್ | ಜನತಾ ನ್ಯೂಸ್

04 Jul 2021
389

ಮೈಸೂರು : "ಅಂಬಾರಿ ಹೊರಲು ಯಾವ ಆನೆ ಸೂಕ್ತವೆಂಬುದು ಮುಖ್ಯ. ಅಪ್ಪ ಅಂಬಾರಿ ಹೊತ್ತಿದ್ದ ಎಂದು ಮರಿಯಾನೆಗೆ ಹೊರಿಸಲು ಸಾಧ್ಯವಿಲ್ಲ. ಬದಲಾವಣೆ ಎಂಬುದು ಜಗದ ನಿಯಮ" ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸೂಚ್ಯವಾಗಿ ತಿಳಿಸಿದರು.

ನಮ್ಮ‌ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗ್ತಿದೆ. ಜಿಪಂ, ತಾಪಂ ಮೀಸಲಾತಿ ಸರ್ಕಾರ ಮಾಡಬೇಕು. ಆದರೆ ಕುಮಾರಸ್ವಾಮಿ ಹೇಳಿದಂತೆ ಮೀಸಲಾತಿ ಮಾಡಿದ್ದಾರೆ. ಅನುಕೂಲ‌ ಬಂದಂತೆ ಮೀಸಲಾತಿ ಹಂಚಿಕೆ‌ ಮಾಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ‌ ವಿರುದ್ದ ಬಹಿರಂಗ ಅಸಮಧಾನ ತೋಡಿಕೊಂಡರು.

ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವಂತದ್ದಲ್ಲ. ಸಿಎಂ ಅಂದರೆ ರಾಜ್ಯದ ಜನರ ಆಶೋತ್ತರ ಈಡೇರಿಸುವ ಮತ್ತು ಜನಪರ ಕಾಳಜಿಯಿರುವಂತಹ ಹುದ್ದೆ. ಮುಖ್ಯಮಂತ್ರಿ ಆದವರು ಸೃಜನಶೀಲರಾಗಿರಬೇಕು ಎಂದು ಸುದ್ದಿಗಾರರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ.​ ಜನರು ದೇಗುಲಕ್ಕೆ ಹೋದರೆ ರಾಜಗೋಪುರಕ್ಕೆ ಕೈಮುಗಿಯುತ್ತಾರೆ. ರಾಜಗೋಪುರದ ಕೆಳಗಿನ ಚಪ್ಪಡಿಗಳು ಜನರಿಗೆ ಕಾಣುವುದಿಲ್ಲ. ಚಪ್ಪಡಿ ಕಲ್ಲಿನ ಮೇಲೆ ಚಪ್ಪಲಿಬಿಟ್ಟು ರಾಜಗೋಪುರ ನೋಡುತ್ತಾರೆ. ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತಾಗಿದೆ. ನಮ್ಮದೇ ಸರ್ಕಾರವಿದ್ದರೂ ಯಾವುದೇ ಉಪಯೋಗವಿಲ್ಲ.

ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಒತ್ತು ನೀಡುತ್ತಿಲ್ಲ. ಜಿ.ಪಂ., ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟವಾಗಿದೆ. ಆದರೆ ಪ್ರತಿಪಕ್ಷ ನಾಯಕರಿಗೆ ಅನುಕೂಲವಾಗುವಂತೆ ಮೀಸಲಾತಿ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ ಸಚಿವ ಸಿ.ಪಿ.ಯೋಗೇಶ್ವರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನನ್ನ ಹಣೆ ಬರಹ, ಏನ್ ಮಾಡುವುದು ದೇವಾಲಯದ ಗೋಪುರದ ಕಾರಂಜಿ ತರಹ ಆಗಿದ್ದೀನಿ. ವೈಯುಕ್ತಿಕವಾಗಿ ವಿಚಾರ ಇದ್ದರೆ ರುಜುವಾತು ಮಾಡಬೇಕು. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳುವುದು ಎಂದು ಬೇಸರ ತೋಡಿಕೊಂಡರು.

ಶ್ರೀರಾಮುಲು ಪಿಎ ವಿರುದ್ಧ ದೂರು ವಿಚಾರವಾಗಿ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಕರೆದು ಹೆಳಬಹುದಿತ್ತು. ದೂರು ಕೊಡುವಂತಹ ಅಗತ್ಯವಿರಲಿಲ್ಲ‌ ಎಂದರು.

RELATED TOPICS:
English summary :Yogeshwar

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...