Wed,Apr24,2024
ಕನ್ನಡ / English

ಕಾಂಗ್ರೆಸ್‌ ಗೆ ಈಗಿರುವ ಶಕ್ತಿ ಸಾಲದು, ಆಮದು ಶಕ್ತಿಯ ಅವಶ್ಯಕತೆ ಇದೆ: ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

04 Jul 2021
1758

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಈಗಿರುವ ಶಕ್ತಿ ಸಾಲದು,ಅವರಿಗೆ ಆಮದು ಶಕ್ತಿಯ ಅವಶ್ಯಕತೆ ಇದೆ. ಹೀಗಾಗಿ ಅವರ ಆತಂಕ ಡಿ.ಕೆ. ಶಿವ ಕುಮಾರ್ ಹೇಳಿಕೆಯಲ್ಲಿ ಕಾಣುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್‌ ಪಕ್ಷಕ್ಕೆ 17 ಜನ ಸೇರಿದಂತೆ ಯಾರು ಬೇಕಾದರು ಸೇರ್ಪಡೆಯಾಗಬಹುದು ಎಂಬ ಡಿ.ಕೆ . ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ರೀತಿಯಲ್ಲಿ ವ್ಯಂಗ್ಯವಾಗಿ ಟೀಕೆ ಮಾಡಿದರು. ಕಾಂಗ್ರೆಸ್‌ಗೆ ವಲಸಿಗರು ಮರಳಿ ಬಂದರೆ ಸ್ವಾಗತ ಎಂಬ ಹೇಳಿಕೆಯನ್ನು ಡಿಕೆ ಶಿವಕುಮಾರ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.

ಮೇಕೆದಾಟು ಯೋಜನೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರೆದ ಪತ್ರಕ್ಕೆ ತಮಿಳುನಾಡು ಮುಖ್ಯಮಂತ್ರಿಗಳು ಸ್ಪಂದಿಸಬೇಕು. ಈ ಯೋಜನೆಯಿಂದ ಎರಡೂ ರಾಜ್ಯಗಳಿಗೆ ಅನುಕೂಲವಾಗಲಿದೆ ಎನ್ನುವುದನ್ನು ತಿಳಿಯಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಮೇಕೆದಾಟು ಯೋಜನೆಯಿಂದ ಇಬ್ಬರಿಗೂ ಅನುಕೂಲ ಇದೆ. ನಮಗೆ ಕುಡಿಯುವ ನೀರು ಸಿಗುತ್ತದೆ. ಮಳೆ ಕಡಿಮೆಯಾದಾಗ ಅವರ ಪಾಲಿನ ನೀರನ್ನ ಕೊಡಲು ಸಾಧ್ಯವಾಗುತ್ತದೆ. ಎರಡೂ ರಾಜ್ಯಕ್ಕೆ ಅನುಕೂಲ ಆಗುತ್ತದೆ ಎಂದೂ ಗೊತ್ತಿದ್ದರೂ ಕೂಡ ಅವರು ಸುಪ್ರೀಂ ಕೋರ್ಟ್​ನಲ್ಲಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಆದರೂ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.

ಮೇಕೆದಾಟು ನಮ್ಮ ವ್ಯಾಪ್ತಿಯಲ್ಲಿ ಮಾಡುತ್ತಿದ್ದೇವೆ. ಅವರ ಪಾಲಿನ ನೀರಿಗೆ ಯಾವುದೇ ತೊಂದರೆಯಾಗಲ್ಲ. ಆದರೂ ಅವರು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಮಾರ್ಕಂಡೇಯ ಜಲಾಶಯ ವಿಷಯವಾಗಿ ಮೊದಲಿನಿಂದಲೂ ತಗಾದೆ ತೆಗೆಯುತ್ತಿದ್ದಾರೆ. ಇದೆಲ್ಲ ರಾಜಕೀಯ ಕಾರಣಕ್ಕಾಗಿ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಿದೆ. ಸಣ್ಣ ವಿಚಾರ ದೊಡ್ಡದು ಮಾಡುತ್ತಿದ್ದಾರೆ ಎಂದರು.

RELATED TOPICS:
English summary :Basavaraj Bommai

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...