ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್ | ಜನತಾ ನ್ಯೂಸ್
ಬೆಂಗಳೂರು : ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆಗೈದು ಸ್ಟ್ರೋಕ್ದಿಂದ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ ಪತಿರಾಯನ ಅಸಲಿ ಬಣ್ಣ ಬಯಲಾಗಿದೆ. ಆರೋಪಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಅಜಿತ್ ಹಾಗೂ ಸಾನಿಯಾ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ ಕೆಲ ತಿಂಗಳಿನಿಂದ ಆರೋಪಿ ಕುಡಿದು ಬಂದು ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.
ಕಳೆದ ತಿಂಗಳು ಮೇ 29ರಂದು ಸಹ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಮನೆಯಲ್ಲಿದ್ದ ದೊಣ್ಣೆಯಿಂದ ಸಾನಿಯಾ ತಲೆಗೆ ಬಲವಾಗಿ ಹೊಡೆದು ಅಜಿತ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರ ಗಾಯಗೊಂಡು ಕುಸಿದು ಬಿದ್ದ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾನೆ.
ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಕೋಲೇಔಟ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು.
ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯಾಗಿದ್ದಾಗಿ ಮಾಹಿತಿ ಸಿಕ್ಕಿದೆ. ಬಳಿಕ ಪತಿ ಅಜಿತ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆದಿರುವುದು ಬಯಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.