ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ: ಮನನೊಂದ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು | ಜನತಾ ನ್ಯೂಸ್
ಮಂಡ್ಯ : ಮದುವೆ ಆಗಿ ಬಿಟ್ಟರೆ ಬೇರೆ ಬೇರೆ ಆಗ್ತೀವಿ ಅಂತ ನೊಂದ ಅವಳಿ ಸಹೋದರಿಯರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ನಿವಾಸಿಗಳಾದ ಸುರೇಶ್ ಮತ್ತು ಯಶೋದ ದಂಪತಿಯ ಅಂತಿಮ ವರ್ಷದ ಡಿಪ್ಲೊಮಾ ಓದುತ್ತಿದ್ದ ಅವಳಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19) ಒಟ್ಟಿಗೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇಬ್ಬರು ಪುತ್ರಿಯರನ್ನು ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.