ಹೆಚ್ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ನಿಧನ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮಾಧ್ಯಮ ಸಲಹೆಗಾರರಾಗಿದ್ದ ಸದಾನಂದ ಕೆ.ಸಿ. ಹೃದಯಾಘಾತದಿಂದ ನಿಧನರಾಗಿದ್ದಾರೆ.
ರಾತ್ರಿ ಹೃದಯಾಘಾತವಾದ ತಕ್ಷಣ ಬೆಂಗಳೂರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.
ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿದ್ದಾಗ ಹಿರಿಯ ಪತ್ರಕರ್ತ ಸದಾನಂದ ಕೆ.ಸಿ. ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಿಸಿದ್ದರು. 2018 ಮೇ 25ರಿಂದ ಪೂರ್ವಾನ್ವಯ ಆಗುವಂತೆ ಕೆ.ಸಿ.ಸದಾನಂದ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.
ಕಳೆದ 10 ವರ್ಷಗಳಿಂದ ಹೆಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ನಿರ್ವಹಣೆ ಮಾಡುತ್ತಿದ್ದರು.