Wed,Apr24,2024
ಕನ್ನಡ / English

ಪರಿಸರ ಮಾಲಿನ್ಯ ತಡೆಗಟ್ಟಲು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ: ಸಚಿವ ಯೋಗೇಶ್ವರ್ | ಜನತಾ ನ್ಯೂಸ್

06 Jul 2021
1546

ಬೆಂಗಳೂರು : ಗಣಿಗಾರಿಕೆ, ಕೈಗಾರಿಕೆ, ನಿರ್ಮಾಣ ಕ್ಷೇತ್ರ ಹಾಗೂ ಔಷಧಿ ಉತ್ಪಾದನಾ ಕಂಪನಿಗಳು ಸೇರಿದಂತೆ ವಿವಿಧ ರೀತಿಯ ಕೈಗಾರಿಕೆಗಳಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ರಾಜ್ಯ ಮಟ್ಟದ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಹೆಚ್ಚಿನ ಅಧಿಕಾರ ನೀಡಬೇಕೆಂದು ಪರಿಸರ, ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಮತ್ತು ರಾಜ್ಯ ಮಟ್ಟದ ತಜ್ಞರ ಸಮಿತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು "ಎ" ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ಕೇಂದ್ರ ಸರ್ಕಾರದ ಅಧಿಕಾರದ ವ್ಯಾಪ್ತಿಗೆ ಬರುತ್ತವೆ.

"ಬಿ" ವರ್ಗದ ಯೋಜನೆಗಳು ಹಾಗೂ ಚಟುವಟಿಕೆಗಳು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಹೊಸದಾಗಿ ಸ್ಥಾಪಿಸುವ ಉದ್ಯಮಿಗಳಿಗೆ ನಾವು ಕೇವಲ ಪರಿಸರ ವಿಮೋಚನಾ ಪತ್ರ (Environment Clearance) ನೀಡಿ ಅನುಮತಿ ನೀಡುತ್ತೇವೆ. ಅನುಮತಿ ನೀಡಿದ ನಂತರ ಕೈಗಾರಿಕೆಗಳು ಪರಿಸರ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸುವ ಬಗ್ಗೆ ನಾವು ಪರಿಶೀಲನೆ ಮಾಡುತ್ತಿಲ್ಲ. ನಮಗೆ ಅದರ ಮೇಲೆ ನಿಯಂತ್ರಣ ಸಹ ಇಲ್ಲ. ಹೀಗಾಗಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಮಧ್ಯೆ ಪ್ರವೇಶಿಸಿ ಹಲವಾರು ಚಟುವಟಿಕೆಗಳನ್ನು ನಿಲ್ಲಿಸಿದೆ.

ಇನ್ನು ಮುಂದೆ "ಬಿ" ವರ್ಗದ ಚಟುವಟಿಕೆಗಳ ಮೇಲೆ ನಿಯಂತ್ರಣವಿಡಲು ಹಾಗೂ ಪರಿಶೀಲನೆ ಮಾಡಲು ಪ್ರಸ್ತಾವನೆ ಕಳುಹಿಸಿ ಎಂದು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಪರಿಸರ ಮಾಲಿನ್ಯ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷರಾದ ಸಾಸ್ವತಿ ಮಿಶ್ರಾ ಅವರಿಗೆ ಸೂಚಿಸಿದರು.

ಬಿ 1 ಮತ್ತು ಬಿ 2 ವರ್ಗದ ಕೈಗಾರಿಕೆಗಳು ಯಾವುದೇ ರೀತಿಯಲ್ಲೂ ಪರಿಸರ ಮಾಲಿನ್ಯ ಮಾಡದಂತೆ ಅವುಗಳ ಮೇಲೆ ನಮ್ಮ ಹತೋಟಿ ಇರಬೇಕು ಹಾಗೂ ಅವರು ನಮ್ಮ ನಿಯಂತ್ರಣದಲ್ಲಿರುವಂತೆ ಸಮರ್ಪಕವಾದ ಆದೇಶ ಹೊರಡಿಸಲು ಪ್ರಸ್ತಾವನೆ ಕಳುಹಿಸಿ ಎಂದು ಸಚಿವರು ಸೂಚಿಸಿದರು.

ಪ್ರಸಕ್ತ ಪರಿಸರ ಮಾಲಿನ್ಯ ಮೌಲ್ಯಮಾಪನ ಪ್ರಾಧಿಕಾರ ಹಾಗೂ ತಜ್ಞರ ಸಮಿತಿ ಮುಂದೆ ಗಣಿಗಾರಿಕೆಗೆ ಸಂಬಂಧಿಸಿದ 78 ಕಡತಗಳು ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದ 34 ಹಾಗೂ ಕೈಗಾರಿಕೆಗಳಿಗೆ ಸಂಬಂಧಿಸಿದ 2 ಕಡತಗಳು ಬಾಕಿ ಇದ್ದು, ಈ ತಿಂಗಳು 23 ಹಾಗೂ 24ರಂದು ಸಭೆ ಏರ್ಪಡಿಸಿದ್ದು, ಕಡತಗಳನ್ನು ಇತ್ಯರ್ಥ ಪಡಿಸುವುದಾಗಿ ಸದಸ್ಯರುಗಳು ತಿಳಿಸಿದರು.

RELATED TOPICS:
English summary :Yogeshwar

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...