Thu,Apr25,2024
ಕನ್ನಡ / English

ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದು ಕೋವಿಡ್‌ನಿಂದ ಮೃತಪಟ್ಟವರ ಸಾಲ ಮನ್ನಾ | ಜನತಾ ನ್ಯೂಸ್

06 Jul 2021
1704

ಮೈಸೂರು : ರಾಜ್ಯ ಸರ್ಕಾರ ರೈತರ ಪರವಿದೆ. ರೈತರ ಸಂಕಷ್ಟಕ್ಕೆ ಸದಾ ನೆರವಾಗುತ್ತಿದೆ. ಜಿಲ್ಲಾ ಸಹಕಾರ ಬ್ಯಾಂಕ್‌ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು.

ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳಿಂದ ಸಾಲ ಪಡೆದಿರುವವರು ಕೋವಿಡ್ ನಿಂದ ಮೃತಪಟ್ಟಿದ್ದರೆ ಅಂಥವರ ಪಟ್ಟಿ ಹಾಗೂ ಸಾಲ ವಿವರವನ್ನು ಕೊಡುವಂತೆ ಈಗಾಗಲೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಎಂಡಿಗಳಿಗೆ ನಾನು ಸೂಚನೆಯನ್ನು ನೀಡಿದ್ದೇನೆ. ಶೀಘ್ರದಲ್ಲಿಯೇ ವಿವರಗಳನ್ನು ಪಡೆದು ಕಾರ್ಯಕ್ರಮವನ್ನು ಆಯೋಜಿಸಿ ಸಾಲಮನ್ನಾವನ್ನು ಘೋಷಿಸಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ 30 ಲಕ್ಷ ರೈತರಿಗೆ 20810 ಕೋಟಿ ರೂಪಾಯಿ ಬೆಳೆ ಸಾಲ ನೀಡುವಂತೆ ಮುಖ್ಯಮಂತ್ರಿಗಳು ಗುರಿಯನ್ನು ನಿಗದಿಪಡಿಸಿದ್ದು, ಕಳೆದ ವರ್ಷದಂತೆ ಶೇಕಡಾ 100ರ ಗುರಿಯನ್ನು ಮೀರಿ ಸಾಲ ವಿತರಣೆ ಮಾಡಬೇಕೆಂಬ ಸೂಚನೆ ನೀಡಿದ್ದಾಗಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ಕಳೆದ ವರ್ಷ ಸಾಲ ನೀಡಿಕೆ ಗುರಿಯನ್ನು ಮೀರಿ ಹೇಗೆ ಶೇ.114ರಷ್ಟು ಬೆಳೆಸಾಲವನ್ನು ನೀಡಲಾಗಿದೆಯೋ ಹಾಗೆಯೇ ಈ ಬಾರಿಯೂ ಸಹಕಾರ ಇಲಾಖೆ ಸಾಧನೆ ಮಾಡಲಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇದರಂತೆ ಈಚೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ವಿಭಾಗದ ಡಿಸಿಸಿ ಬ್ಯಾಂಕ್ ವತಿಯಿಂದ ಕಾರ್ಯಕ್ರಮ ನಡೆಸಿ, ಪ್ರಸಕ್ತ ಸಾಲಿನ ಸಾಲ ನೀಡಿಕೆ ಪ್ರಕ್ರಿಯೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮೈಸೂರಿನಲ್ಲಿ ಈಗ 2ನೇ ಹಂತದ ಕಾರ್ಯಕ್ರಮಕ್ಕೆ ನಾನು ಚಾಲನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

RELATED TOPICS:
English summary :Somashekar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...