Thu,Apr25,2024
ಕನ್ನಡ / English

ಕೇಂದ್ರ ಸಂಪುಟ ಪುನರ್ ರಚನೆ: ಪ್ರಧಾನಿ ಮೋದಿ ಸಂಪುಟದಿಂದ ಇಂದು ಹೊರಬಂದವರ ಪಟ್ಟಿ ಇಲ್ಲಿದೆ | ಜನತಾ ನ್ಯೂಸ್

07 Jul 2021
1801

ನವದೆಹಲಿ : ಇಂದು ಸಂಜೆ ನಡೆಯಲಿರುವ ಕೇಂದ್ರ ಸಂಪುಟ ಪುನರ್ ರಚನೆಯಲ್ಲಿ 11 ಸಚಿವರಿಗೆ ಕೊಕ್ ನೀಡಲಾಗುತ್ತಿದ್ದು, ಹೊಸದಾಗಿ 43 ಹೊಸ ಸದಸ್ಯರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ.

ಆರೋಗ್ಯ ಸಚಿವ ಹರ್ಷವರ್ಧನ್​, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್​ ನಿಶಾಂಕ್, ​ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ರಾಜ್ಯ ಸಚಿವ ಬಬುಲ್​ ಸುಪ್ರಿಯೋ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್​ಚಂದ್​ ಗೆಹಲೋತ್​, ಪಶುಸಂಗೋಪನೆ- ಹೈನುಗಾರಿಕೆ -ಮೀನುಗಾರಿಕೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆಯ ರಾಜ್ಯ ಸಚಿವ ಪ್ರತಾಪ್​ ಚಂದ್ರ ಸಾರಂಗಿ, ಜಲ ಶಕ್ತಿ ಮತ್ತು ಸಾಮಾಜಿಕ ನ್ಯಾಯ-ಸಬಲೀಕರಣ​ ಇಲಾಖೆ ಸಚಿವ ರತನ್​ಲಾಲ್ ಕಟಾರಿಯಾ, ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ರಾವ್​ ಸಾಹೇಬ್​ ಪಾಟೀಲ್​ ದಾನ್ವೆ, ಕಾರ್ಮಿಕ ಸಚಿವ ಸಂತೋಷ್​ ಗಾಂಗ್ವಾರ್​, ಶಿಕ್ಷಣ ಇಲಾಖೆ ರಾಜ್ಯ ಸಚಿವ ಸಂಜಯ್​ ಧೋತ್ರೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.

ಹೆಚ್ಚಿನ ಸಂಖ್ಯೆಯ ಎಸ್ ಸಿ, ಎಸ್ ಟಿ ಪ್ರತಿನಿಧಿಸುವ ಸಂಸದರು ಸೇರಿದಂತೆ 43 ಹೊಸ ಸದಸ್ಯರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಂಪುಟ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರಲಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ.

ಕೇಂದ್ರ ಮಂತ್ರಿ ಪರಿಷತ್ ಸೇರಲಿರುವ ಮಂತ್ರಿಗಳ ಶಪಥ ಗ್ರಹಣ ಸಮಾರೋಹ ಸಮಾರಂಭವು ರಾಷ್ಟ್ರಪತಿ ಭವನದಲ್ಲಿ ಬುಧವಾರ ಆಷಾಢ 16, 1943ನೇ ಶಖೆ(ಜುಲೈ 7, 2021) ಸಂಜೆ 6 ಗಂಟೆಗೆ ನಡೆಯಲಿದೆ.

RELATED TOPICS:
English summary :Union Cabinet Reshuffle

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...