ಇಂದು ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಬಿಡುಗಡೆ! | ಜನತಾ ನ್ಯೂಸ್
ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆದಿದ್ದು, ನೂತನ ಸಚಿವ ಸಂಪುಟಕ್ಕೆ 43 ಮಂದಿ ಸಂಸದರು ಸೇರ್ಪಡೆಯಾಗಲಿದ್ದಾರೆ.
ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ.
ಅದೇ ರೀತಿ ರಸಾಯನಿಕ ಹಾಗೂ ರಸಗೊಬ್ಬರ ಸಚಿವರಾಗಿದ್ದ ಡಿ.ವಿ. ಸದಾನಂದಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯ ಪ್ರಹ್ಲಾದ್ ಜೋಶಿ ಹಾಗೂ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಸೇರಿ ಕರ್ನಾಟಕದಿಂದ ೬ ಸಂಸದರು ಸಚಿವರಾಗಲಿದ್ದಾರೆ.
RELATED TOPICS:
English summary :Cabinet Expansion New Ministers Oath Taking Ceremony