Fri,Apr26,2024
ಕನ್ನಡ / English

ಬಿಜೆಪಿ ಎಂದರೆ ತಿಗಣೆ ಇದ್ದಂತೆ, ಜನರ ರಕ್ತ ಹೀರುವುದು ಅವರ ಕೆಲಸ : ಸಿದ್ದರಾಮಯ್ಯ | ಜನತಾ ನ್ಯೂಸ್

07 Jul 2021
2481

ಮೈಸೂರು : ಬಿಜೆಪಿ ಎಂದರೆ ತಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ, ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ, ಸಹಾಯ ಹಸ್ತ, ಸೈಕಲ್ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.‌

ಬಿಪಿಎಲ್ ಕಾರ್ಡ್​ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರ್ಕಾರ ಇದ್ದಿದ್ದರೆ, 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡ್ತಿದ್ದೆವು. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರ್ಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ.

ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ ಹಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಪ್ರಧಾನಿ ಮೋದಿ ಹೇಳುವುದೆಲ್ಲಾ ಸುಳ್ಳು. ಪ್ರಧಾನಿ ಅಚ್ಛೇ ದಿನ್ ಆಯೇಗಾ ಅಂದರೆ ಕೆಟ್ಟ‌ ದಿನ ಬರುತ್ತಿದೆ ಅಂತಾ ಅರ್ಥ. ಅವರು 2014ರಲ್ಲಿ ಹೇಳಿದ ಯಾವುದಾದರೂ ಒಂದು ಮಾತನ್ನು ಜಾರಿಗೊಳಿಸಿದ್ದಾರಾ? ಎಂದು ಪ್ರಶ್ನಿಸಿದರು.

ಎಲ್ಲರೂ ನಾಚುವಂತೆ ಲಂಚ ಪ್ರಕ್ರಿಯೆ ನಡೆಯುತ್ತಿದೆ. ಅಧಿಕಾರ ವರ್ಗಾವಣೆಯಲ್ಲಿ ಲಂಚ, ಪೇಮೆಂಟ್​ ಮಾಡುವಲ್ಲಿ ಲಂಚ, ಪ್ರಾಜೆಕ್ಟ್​ ಕ್ಲಿಯರ್ ಮಾಡಬೇಕಂದ್ರೆ ಲಂಚ ಹೀಗೆ ಎಲ್ಲದಕ್ಕೂ ಲಂಚ ಪಡೆಯಲಾಗುತ್ತಿದೆ.ಅವರ ಪಾರ್ಟಿಯವರೇ ಹಣ ಕೊಡುತ್ತಿದ್ದಾರೆ. ಶೇ.10ರಷ್ಟು ಲಂಚವಿಲ್ಲದೇ ಯಾವ ಫೈಲ್ ಕೂಡ ಈ ಸರ್ಕಾರದಲ್ಲಿ ಮುಂದಕ್ಕೆ ಹೋಗುತ್ತಿಲ್ಲ. ಯಡಿಯೂರಪ್ಪನವರದು ಸ್ವಾತಂತ್ರ್ಯ ನಂತರದ ಅತ್ಯಂತ ಕೆಟ್ಟ ಮತ್ತು ಭ್ರಷ್ಟ ಸರ್ಕಾರ. ಈ ರಾಜ್ಯವನ್ನು ಇವರು ಹಾಳು ಮಾಡುತ್ತಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ. ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್‌ನಲ್ಲಿ ಬರುವ ಮಾಹಿತಿ ಇದೆ. ಒಂದು, ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು. ಇದು ದೊಡ್ಡ ಸಾಂಕ್ರಾಮಿಕ ರೋಗ. ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

RELATED TOPICS:
English summary :Siddaramaiah

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...