Fri,Apr26,2024
ಕನ್ನಡ / English

ನಕಲಿ ವಿಡಿಯೊ ಸೃಷ್ಟಿಸಿ ನನ್ನ ಹಾಗು ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು | ಜನತಾ ನ್ಯೂಸ್

09 Jul 2021
2650

ಬೆಂಗಳೂರು : ಸಂಸದೆ ಸುಮಲತಾ ಅಂಬರೀಷ್ ಪರ ಮಾತನಾಡಿರುವ ಚಲನಚಿತ್ರ ನಿರ್ಮಾಪಕ, ಅಂಬರೀಷ್ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ನಕಲಿ ವಿಡಿಯೊ ಸೃಷ್ಟಿಸಿ ತಮ್ಮ ಮತ್ತು ಸುಮಲತಾ ಅವರ ತೇಜೋವಧೆ ಮಾಡಲು ಹೊರಟಿದ್ದರು, ಸುಮಲತಾ ಅವರ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು ಎಂದು ಗುರುತರ ಆರೋಪಗಳನ್ನು ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ, ಚುನಾವಣೆ ಸಂಬಂಧ ಬೆಂಗಳೂರು ಮತ್ತು ಮಂಡ್ಯದಲ್ಲಿ ಹಲವು ಸಭೆಗಳನ್ನು,ಚರ್ಚೆಗಳನ್ನು ಮಾಡುತ್ತಿದ್ದೆವು. ನಮ್ಮ ಬೆಂಬಲಿಗರ ಜೊತೆ ಚರ್ಚಿಸಲು ಹೊಟೇಲ್ ಗಳಲ್ಲಿ ಕೂಡ ಸಭೆ ಮಾಡುತ್ತಿದ್ದೆವು.

ಹೀಗೆ ಏಟ್ರಿಯಾ ಹೊಟೇಲ್ ನಲ್ಲಿ ಸಭೆ ನಡೆಸಲು ನಿಶ್ಚಯಿಸಿದ್ದಾಗ ಕಾರಿನಿಂದ ನಾನು ಮತ್ತು ಸುಮಲತಾ ಅವರು ಇಳಿದು ಹೋಗುವಾಗ ಹೊಟೇಲ್ ನ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಸೆಕ್ಯುರಿಟಿ ಕೈಯಿಂದ ಪಡೆದುಕೊಂಡು ಸುಮಲತಾ ಅವರ ಹೆಗಲಿಗೆ ಯಾರೋ ಕೈ ಹಾಕಿದ್ದ ಫೋಟೋ ಬಳಸಿಕೊಂಡು ನಾನು ಮತ್ತು ಸುಮಲತಾ ಅವರು ಹೊಟೇಲ್ ಕಾರಿಡಾರ್ ಮೂಲಕ ರೂಂಗೆ ಇಬ್ಬರೇ ಹೋಗುತ್ತೇವೆ ಎಂದು ಅಶ್ಲೀಲ ಚಿತ್ರಗಳನ್ನು ತಂದು ಪೇಸ್ಟ್ ಮಾಡಿ ನಕಲಿ ವಿಡಿಯೊ ಸೃಷ್ಟಿಸಿ ಚುನಾವಣೆ ಸಂದರ್ಭದಲ್ಲಿ ಹರಿಬಿಡಲು ಆಸೆಪಟ್ಟಿದ್ದರು.

ಡಾ ರಾಜ್ ಕುಮಾರ್ ಅವರು ತೀರಿಕೊಂಡಾಗ ಯಾರು ಸಿಎಂ ಆಗಿದ್ದರು ಎಂದು ಗೊತ್ತಿದೆ, ಡಾ ವಿಷ್ಣುವರ್ಧನ್ ಅವರು ತೀರಿಕೊಂಡಾಗ ಅಂಬರೀಷ್ ಅವರೇ ಖುದ್ದು ನಿಂತು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಸಿದ್ದರು. ಆಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದರು. ಅಂಬರೀಷ್ ಅವರಿಗೆ ಯಾರೂ ಬೇಕಾಗಿಲ್ಲ, ಯಾರು ಏನೂ ಮಾಡಬೇಕಾಗಿರಲಿಲ್ಲ, ಅವರು ದೇವಮಾನವ, ದೇವರು ಅವರಿಗೆ ಮಾಡಬೇಕಾದ್ದನ್ನು ಮಾಡಿಸಿಕೊಂಡು ಕರೆದುಕೊಂಡು ಹೋದರು ಎಂದರು.

ಈ ಬಗ್ಗೆ ಹೆಚ್ ಡಿ ಕುಮಾರಸ್ವಾಮಿಯ ಚಾನೆಲ್ ನಲ್ಲಿದ್ದ ಅಂಬರೀಷ್ ಅವರ ಅಭಿಮಾನಿಯೇ ನನ್ನಲ್ಲಿ ಹೇಳಿದ್ದರು, ಕೊನೆಗೆ ಅದು ಚುನಾವಣೆ ಸಮಯದಲ್ಲಿ ಬಿಡುಗಡೆ ಮಾಡದೆ, ಇನ್ನೊಂದು ಸಂದರ್ಭದಲ್ಲಿ ನೋಡೋಣ ಎಂದು ನಿರ್ಧರಿಸಿದ್ದಾರೆ ಎಂದರು. ಅಂದರೆ ಅವರ ಮನಸ್ಸು ಎಷ್ಟು ಹೊಲಸಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿಯವರನ್ನೇ ಸಂಬೋಧಿಸಿ ರಾಕ್ ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

RELATED TOPICS:
English summary :Rockline Venkatesh, Sumalatha Ambareesh

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...