Fri,Apr26,2024
ಕನ್ನಡ / English

ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?.. ಡಿಕೆಶಿ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ | ಜನತಾ ನ್ಯೂಸ್

10 Jul 2021
2113

ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತನಿಗೆ ಹೊಡೆಯುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ರೌಡಿ ಲಕ್ಷಣ ತೋರುತ್ತಿದ್ದಾರೆ ಎಂದು ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾರಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆಯೂ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು ಎಂದು ಕಿಡಿಕಾರಿದೆ.

ಟ್ವಿಟ್ಟರ್​ನಲ್ಲಿ ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಗತಕಾಲದ ನೆನಪು ಕಾಡಿತೇ? ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡುವುದು ಅಕ್ಷಮ್ಯ ಎಂದು ತಿಳಿಸಿದೆ. ಅಲ್ಲದೆ "ರೌಡಿಡಿಕೆಶಿ" ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದೆ.

ಡಿಕೆ ಶಿವಕುಮಾರ್​ ತನ್ನ ವರ್ತನೆಯನ್ನು ಹಿಡಿತದಲ್ಲಿ ಇಟ್ಟುಕೊಳ್ಳಬೇಕು. ನೀವು ಕೊತ್ವಾಲನ ಶಿಷ್ಯ ಆಗಿರಬಹುದು, ಜೈಲಿಗೂ ಹೋಗಿ ಬಂದಿರಬಹುದು. ಆದರೆ ಆ ರಾಕ್ಷಸಿ ಗುಣಗಳನ್ನು ಅಮಾಯಕರ ಮೇಲೆ ತೋರ್ಪಡಿಸಬೇಡಿ. ರಾಜ್ಯಾಧ್ಯಕ್ಷರ ನಡೆ ಇತರರಿಗೆ ಮಾದರಿಯಾಗಿರಲಿ, ಇದು ಬಸವಣ್ಣನ ನಾಡು ಎಂಬುದು ನೆನಪಿರಲಿ ಎಂದು ಬಿಜೆಪಿ ಎಚ್ಚರಿಸಿದೆ.

ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆ ಇತ್ತೀಚೆಗೆ ಮಿತಿ ಮೀರುತ್ತಿದೆ. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲ್​ ಅನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು? ಎಂದು ಬಿಜೆಪಿ ಪ್ರಶ್ನಿಸಿದೆ.

RELATED TOPICS:
English summary :DKShivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...