ಬಿಜೆಪಿ ನಾಯಕನ ಸಂಬಂಧಿ ಮೇಲೆ ಮಾರಣಾಂತಿಕ ಹಲ್ಲೆ, ಚಾಕುವಿನಿಂದ ಇರಿದು ಕೊಲೆ! | ಜನತಾ ನ್ಯೂಸ್
ಹುಬ್ಬಳ್ಳಿ : ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರ ಸಂಬಂಧಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಗಾಯಗೊಳಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ. ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದೆ. ಅಭಿಷೇಕ್ಗೆ ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಚಾಕು ಇರಿಯಲಾಗಿದೆ ಎನ್ನಲಾಗ್ತಿದೆ.
ಘಟನೆಗೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
RELATED TOPICS:
English summary :Hubli