Fri,Apr26,2024
ಕನ್ನಡ / English

ಕನ್ನಡ ಬಾರದ ಬ್ಯಾಂಕ್ ಸಿಬ್ಬಂದಿಯಿಂದಾಗಿ ರಾಜ್ಯದ ಜನಸಮುದಾಯಕ್ಕೆ ಪ್ರತಿನಿತ್ಯ ಕಿರುಕುಳ - ಸಿದ್ದರಾಮಯ್ಯ | ಜನತಾ ನ್ಯೂಸ್

13 Jul 2021
2072

ಬಾದಾಮಿ : ಕನ್ನಡ ಬಾರದ ಬ್ಯಾಂಕ್ ಸಿಬ್ಬಂದಿಯಿಂದಾಗಿ ರಾಜ್ಯದ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದೆ, ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶದ ಜನತೆ ಹೆಚ್ಚುಹೆಚ್ಚು ಬ್ಯಾಂಕನ್ನು ಅವಲಂಬಿಸಿದ್ದಾರೆ, ಎಂದು ಅವರು ಹೇಳಿದ್ದಾರೆ.

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ಹಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ, ಎಂದು ಅವರು ಕಳವಳ ವ್ಯಕ್ತ ಪಡಿಸಿದ್ದಾರೆ.

2014ಕ್ಕಿಂತ ಮೊದಲು IBPS ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಬಿಜೆಪಿ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರವನ್ನೂ ಬರೆದಿತ್ತು.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶದ ಜನತೆ ಹೆಚ್ಚುಹೆಚ್ಚು ಬ್ಯಾಂಕನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ರಾಜ್ಯ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಯಡಿಯೂರಪ್ಪ ತಕ್ಷಣ ಪ್ರಧಾನಿ ಮಂತ್ರಿ ಕಾರ್ಯಾಲಯ ಗಮನಸೆಳೆದು ಕನ್ನಡಿಗರಿಗೆ ನ್ಯಾಯಒದಗಿಸಬೇಕು, ಎಂದು ಆಗ್ರಹಿಸಿದ್ದಾರೆ.

RELATED TOPICS:
English summary :Bank personnel not knowing Kannada harassing state community daily basis - Siddaramaiah

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...