Sat,Apr27,2024
ಕನ್ನಡ / English

ನಾವು ಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ, ತಮಿಳುನಾಡು ತೀರ್ಮಾನದ ಬಗ್ಗೆ ಮಾತು ಬೇಡ - ಸಿಎಂ ಬಿಎಸ್‌ವೈ | ಜನತಾ ನ್ಯೂಸ್

13 Jul 2021
2052

ಬೆಂಗಳೂರು : ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡುತ್ತೇವೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಯಾವ ತೀರ್ಮಾನ ತೆಗೆದುಕೊಂಡಿದೆ ಎನ್ನುವ ಬಗ್ಗೆ ಮಾತು ಬೇಡ, ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಹೇಳಿದ್ದಾರೆ.

ಇಂದು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಜಲಜೀವನ್ ಮಿಷನ್ ಕುರಿತು ವಿವಿಧ ವಿಷಯಗಳನ್ನು ಚರ್ಚಿಸಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕೇಂದ್ರ ಸಚಿವರೊಂದಿಗೆ ರಾಜ್ಯದ ನೀರಾವರಿ ಯೊಜನೆಗಳ ಬಗ್ಗೆ ಚರ್ಚೆ, ಮಾಡಿದ್ದೇವೆ. ಕೃಷ್ಣಾ ಯೋಜನೆಗೆ ನೋಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು. ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಕ್ಲಿಯರನ್ಸ್ ನೀಡುವುದು, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಆದಷ್ಟು ಬೇಗ ಕೇಂದ್ರದ ದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ, ಎಂದರು.

ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಮೇಕೆದಾಟು ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು, ಎಂದು ಹೇಳಿದರು.

ಬಹಳ ಮಹತ್ವದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲ ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಇನ್ನೂ 25 ಲಕ್ಷ ಮನೆಗಳಿಗೆ ಸಂಪರ್ಕ ಕಲ್ಪಿಸಲು ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ವೈ ಹೇಳಿದರು.

RELATED TOPICS:
English summary :We will implement Mekedatu project, dont bother on Tamil nadu decision - BSY

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...