ನವಜಾತ ಶಿಶು ಹೆಣ್ಣು ಮಗು ದೇವಸ್ಥಾನದ ಬಳಿ ಪತ್ತೆ! | ಜನತಾ ನ್ಯೂಸ್
ಬಳ್ಳಾರಿ : ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ.
ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಜಲಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಮಗುವನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
RELATED TOPICS:
English summary :Ballari