ಕಾರ್ಯಕರ್ತನ ಕೈಯಲ್ಲಿ ಶೂ ಧರಿಸಿಕೊಂಡ ಸಿದ್ದರಾಮಯ್ಯ: ವಿಡಿಯೋ ವೈರಲ್​ | ಜನತಾ ನ್ಯೂಸ್

14 Jul 2021
391

ಚಿಕ್ಕಬಳ್ಳಾಪುರ : ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯಗೆ ಶೂ ತೆಗದು, ತೊಡಿಸಿದ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಹಾರೋಬಂಡೆ ಸಾಯಿಬಾಬಾ ಮಂದಿರ ಬಳಿ ನಡೆದಿದೆ.

ಬಾಗೇಪಲ್ಲಿಗೆ ಆಗಮಿಸುತ್ತಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಜಿ.ಎಚ್.ನಾಗರಾಜ್ ನಿರ್ಮಾಣ ಮಾಡಿರೋ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಈ ವೇಳೆ ಕಾರಿನಿಂದ ಆಗಮನದ ವೇಳೆ ಶೂ ತೆಗೆಯಲು ಕಷ್ಟಪಡುತ್ತಿದ್ದ ಸಿದ್ದರಾಮಯ್ಯರನ್ನ ಕಂಡ ಕಾಂಗ್ರೆಸ್ ಕಾರ್ಯಕರ್ತ ನಾರಾಯಣಸ್ವಾಮಿ ಎಂಬವರು ಶೂ ತೆಗೆದು ಸಹಾಯ ಮಾಡಿದರು. ಮತ್ತೆ ಸಿದ್ದರಾಮಯ್ಯ ಅವರು ವಾಪಾಸ್ ಹೋಗುವಾಗಲೂ ಶೂ ತೊಡಿಸಿದರು. ಇದರಿಂದ ಸಿದ್ದರಾಯಮ್ಯನವರು ಸಹ ಕೊಂಚ ಕಸಿವಿಸಿಗೊಂಡರು.

ಇದೀಗ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋ ಕುರಿತು ಪರ-ವಿರೋಧ ಚರ್ಚೆಯಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರಮೋದಿ ಭಾರತದ ಜನರಿಗೆ ವ್ಯಾಕ್ಸಿನ್ ಮಾಡುವ ಬದಲು ಬೇರೆ ದೇಶದ ಜನರಿಗೆ ಆರೂವರೆ ಕೋಟಿ ಲಸಿಕೆ ಕಳುಹಿಸಿದ್ದಾರೆ. ವ್ಯಾಕ್ಸಿನ್ ಕಾರ್ಯ ವೇಗ ಮಾಡಬೇಕಾದ ಯಡಿಯೂರಪ್ಪ ನಿದ್ದೆ ಮಾಡುತ್ತಿದ್ದಾರೆ. ವ್ಯಾಕ್ಸಿನ್ ಕೊಡೋ ಕೆಲಸ ಮಾಡುತ್ತಿಲ್ಲ ಎಂದು ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಹತ್ತಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ? ಎಂದು ಪ್ರಶ್ನಿಸಿದರು.

ಕಾಗೋಡು ತಿಮ್ಮಪ್ಪನವರಿಗೆ ವ್ಯಾಕ್ಸಿನ್ ಸಿಕ್ಕಿಲ್ಲ. ವ್ಯಾಕ್ಸಿನ್ ಪಡೆಯಲು ಬಂದವರನ್ನ ವಾಪಾಸ್ ಕಳುಹಿಸಿದ್ದಾರೆ. ನರೇಂದ್ರ ಮೋದಿ ಸುಳ್ಳುಗಾರ ಅವರಷ್ಟು ಸುಳ್ಳು ಹೇಳೋ ಪ್ರಧಾನಿ ಬೇರೆ ಯಾರೂ ಇಲ್ಲ ಅಚ್ಚೇ ದಿನ್ ಬರುತ್ತೆ ಅಂದ್ರಿ? ಎಲ್ಲಿ ಅಚ್ಛೆ ದಿನ್? ಎಂದು ಅಂತ ವಾಗ್ದಾಳಿ ಮಾಡಿದ್ದಾರೆ.

ರಾಜ್ಯಗಳು ಲಸಿಕೆ ಹಾಕುವುದರಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಈ ಹೊಣೆಯನ್ನು ತನ್ನ ತಲೆ ಮೇಲೆ ಹೊತ್ತುಕೊಂಡ ಪ್ರಧಾನಿಯವರ ಆಶ್ವಾಸನೆ, ಅವರ ಎಂದಿನ ಸುಳ್ಳಿನ ಸರಮಾಲೆಗೆ ಇನ್ನೊಂದು ಸುಳ್ಳಿನ ಸೇರ್ಪಡೆ ಅಷ್ಟೆ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

RELATED TOPICS:
English summary :Siddaramaiah

ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : 49 ವರ್ಷಗಳ ನಂತರ ಪುರುಷರ ಹಾಕಿ ಸೆಮಿಫೈನಲ್ ತಲುಪಿದ ಭಾರತೀಯ ತಂಡ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ವಿಹಾರಕ್ಕೆ ಬಂದಿದ್ದ ಸ್ನೇಹಿತರ ತಂಡ, ಯುವತಿಯೋರ್ವಳು ನೀರುಪಾಲು, ಮೂವರ ರಕ್ಷಣೆ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ಪ್ರವಾಹ: ರಾಜ್ಯ ಸರ್ಕಾರದಿಂದ 510 ಕೋಟಿ ರೂ. ಬಿಡುಗಡೆ, ಸಿಎಂ ಬೊಮ್ಮಾಯಿ ಘೋ‍ಷಣೆ | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ವಿದ್ಯಾರ್ಥಿನಿಯರಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ! | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
ಮುಖ್ಯಮಂತ್ರಿ ಆಗಬೇಕೆಂದು ಗಡ್ಡಬಿಟ್ಟಿದ್ದಲ್ಲ: ಸಿ.ಟಿ.ರವಿ | ಜನತಾ ನ್ಯೂ&#
2022ರ ಮಾರ್ಚ್​ನಲ್ಲಿ
2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನನ್ನ ಸಪೋರ್ಟ್ ಇದೆ : ಹೆಚ್​​ಡಿಡಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ಮತ್ತೆ ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 37 ಸಾವು, 1,987 ಹೊಸ ಪ್ರಕರಣ : ಬೆಂಗಳೂರಿನಲ್ಲಿ 450 | ಜನತಾ ನ್ಯೂ&#
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್
ಕೋವಿಡ್ 3ನೇ ಅಲೆ: ಗಡಿಗಳಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ! | ಜನತಾ ನ್

ನ್ಯೂಸ್ MORE NEWS...