Wed,Apr24,2024
ಕನ್ನಡ / English

ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ ಸ್ಥಾಪನೆಗೆ ತೀರ್ಮಾನ: ಸಂಪುಟ ಸಭೆಯಲ್ಲಿ ಒಪ್ಪಿಗೆ, ಬಸವರಾಜ್ ಬೊಮ್ಮಾಯಿ | ಜನತಾ ನ್ಯೂಸ್

15 Jul 2021
1472

ಬೆಂಗಳೂರು : ಗದಗ ಪಶುಸಂಗೋಪನಾ ಕಾಲೇಜ್ ಎರಡನೇ ಹಂತದ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ, ಪ್ರತಿ ಜಿಲ್ಲೆಗೆ ಗೋಶಾಲೆ ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ ಮುಗಿದ ನಿರ್ದೇಶಕ ಮಂಡಳಿಗೆ ಮಾತ್ರ ಚುನಾವಣೆ ನಡೆಸಲಾಗುವುದು. ಆದರೆ, ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್‌ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.

ಕರ್ನಾಟಕ ಗೋವಧೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿವ ಕಾರಣ, ಜಾನುವಾರುಗಳ ಸಂರಕ್ಷಣೆಗೆ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಗೋಶಾಲೆ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ₹15 ಕೋಟಿ ನೀಡಲಾಗುವುದು. ಕೆಲಸದ ಪ್ರಗತಿ ನೋಡಿಕೊಂಡು ಹೆಚ್ಚುವರಿ ಹಣ ನೀಡಲಾಗುತ್ತದೆ ಎಂದು ಹೇಳಿದರು.

ಈ ಬಾರಿ ಬೆಳೆ ಸಮೀಕ್ಷೆಯನ್ನು ಮೊಬೈಲ್‌ ಆಯಪ್‌ ಮೂಲಕವೇ ನಡೆಸಲು ತೀರ್ಮಾನಿಸಲಾಗಿದೆ. ರೈತರ ಮೊಬೈಲ್ ಆಯಪ್‌ ಮೂಲಕ ತಮ್ಮ ಕೃಷಿ ಜಮೀನಿನ ಮಾಹಿತಿ ನೀಡಬೇಕು. ಇದಕ್ಕೆ ಅವರು ಖಾಸಗಿ ವ್ಯಕ್ತಿಗಳ ನೆರವು ಪಡೆಯಬಹುದು. ಇದಕ್ಕಾಗಿ ₹48 ಕೋಟಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ 9 ಆಕ್ಷಿಜನ್ ಘಟಕ ಇದೆ. 815 ಉತ್ಪಾದನಾ ಸಾಮರ್ಥ್ಯ ಇದೆ. 5000 ಮೆಟ್ರಿಕ್ ಟನ್ ಸಂಗ್ರಹ ಸಾಮರ್ಥ್ಯ ಇದೆ. ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಖಾಸಗಿ ಬಂಡವಾಳದಾರರು ಬಂದರೆ ಸಬ್ಸಿಡಿ ನೀಡಲಾಗುವುದು. ಕನಿಷ್ಠ 10 ಕೋಟಿ ಬಂಡವಾಳ ಹೂಡಬೇಕು ಎಂದರು.

ದಾಸನಪುರದಲ್ಲಿ ಎಪಿಎಂಸಿ 93 ಮಳಿಗೆಗಳಿವೆ. ಲೀಸ್ ಕಂ ಸೇಲ್ 24ಲಕ್ಷ ದಿಂದ 20 ಲಕ್ಷಕ್ಕೆ ಕಡಿಮೆ ಮಾಡಲಾಗಿದೆ. ಬಾಡಿಗೆ 20 ಸಾವಿರದಿಂದ 15 ಸಾವಿರಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.

ಜೆಒಸಿ ಪಿಯುಸಿ ತತ್ಸಮಾನವಾದ ಶಿಕ್ಷಣ ಎಂದು ಪರಿಗಣಿಸಲಾಗುವುದು. ದೇವದುರ್ಗ ಎಂಜನೀಯರ್ ಕಾಲೇಜ್ ಗೆ 58 ಕೋಟಿ ರೂ. ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ. ಕೆ.ಎಸ್ ಎಫ್.ಸಿ ಕಟ್ ಬಾಕಿ ಆಗಿರುವವರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಲಾಗುವುದು. 15000 ಜನರು ಈಗಾಗಲೇ ಅನುಕೂಲ ಪಡೆದಿದ್ದಾರೆ. ಇನ್ನೂ 2-3.ಸಾವಿರ ಜನರು ಅನುಕೂಲ ಪಡೆಯಲಿದ್ದಾರೆ ಎಂದು ಹೇಳಿದರು.

ಕಾರಾಗೃಹ ಅಭಿವೃದ್ಧಿ ಮಂಡಳಿ ಅಧಿವೇಶನದಲ್ಲಿ ತರಲು ತೀರ್ಮಾನಿಸಲಾಗಿದ್ದು, 139 ಖೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಅನುಮೋದನೆ ಮಾಡಲಾಗಿದೆ.

RELATED TOPICS:
English summary :Bangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...