ಕುತೂಹಲ ಮೂಡಿಸಿದ ಇಂದ್ರಜಿತ್ ಲಂಕೇಶ್, ಕುಮಾರಸ್ವಾಮಿ ಭೇಟಿ, ಫೋಟೋ ವೈರಲ್​! | ಜನತಾ ನ್ಯೂಸ್

16 Jul 2021
433

ಬೆಂಗಳೂರು : ಇಂದ್ರಜಿತ್​ ಲಂಕೇಶ್​ ಮತ್ತು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಭೇಟಿ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ದರ್ಶನ್​ ಅಭಿಮಾನಿಗಳು ಹರಿಬಿಟ್ಟಿದ್ದು, ದರ್ಶನ್​ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ.

ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಜಿ ಸಿಎಂ ಹೆಚ್​ಡಿಕೆ ಅವರ ಭೇಟಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಇಂದ್ರಜಿತ್​ ಲಂಕೇಶ್​ ಅವರು ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ಅವರನ್ನು ಟೀಕೆ ಮಾಡಿದ್ದರು. ಎಲ್ಲಿದ್ದೀಯಾ ಸುಮಲತಾ…ಕರೊನಾ ಸಮಯದಲ್ಲಿ ಜನರ ಜತೆ ಇರೋದು ಬಿಟ್ಟು ಎಲ್ಲಿ ಹೋಗಿದ್ದೀಯಾ? ಕರೊನಾ ಸಮಯದಲ್ಲಿ ಮಂಡ್ಯ ಸ್ವಾಭಿಮಾನಿ ಜನ ಮರೆತುಹೋದ್ರಾ ಎಂದು ಇಂದ್ರಜಿತ್​​ ಟೀಕೆ ಮಾಡಿದ್ದರು.

ಲಂಕೇಶ್​ ಆರೋಪಗಳಿಂದ ಕೆಂಡಾಮಂಡಲರಾಗಿರುವ ದರ್ಶನ್​ ಅಭಿಮಾನಿಗಳು ಲಂಕೇಶ್​ ವಿರುದ್ಧ ಗರಂ ಆಗಿದ್ದಾರೆ. ಇದೀಗ ಲಂಕೇಶ್​ ಮತ್ತು ಮಾಜಿ ಸಿಎಂ ಎಚ್​ಡಿಕೆ ಭೇಟಿ ಆಗಿರುವ ಫೋಟೋಗಳನ್ನು ಅಭಿಮಾನಿಗಳು ಟ್ರೋಲ್​ ಮಾಡುತ್ತಿದ್ದಾರೆ. ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿ, ಇಂದ್ರಜಿತ್ ಎಚ್​ಡಿಕೆ ಭೇಟಿಯಾಗಿದ್ದಾರೆ ಎಂದು ದೂರಿದ್ದಾರೆ. ಪರೋಕ್ಷವಾಗಿ ಇದರ ಹಿಂದೆ ಎಚ್​ಡಿಕೆ ಇದ್ದಾರೆ ಎಂದು ಆರೋಪಿಸಿದ್ದಾರೆ.

ಇಂದ್ರಜಿತ್ ಲಂಕೇಶ್​ದಿಂದ ಕುಮಾರಸ್ವಾಮಿ ಗೃಹ ಸಚಿವರಿಗೆ ದೂರು ಕೊಡಿಸಿದರಾ ಎಂಬ ಪ್ರಶ್ನೆ ಕಾಡುತ್ತಿದೆ. ಜೊತೆಗೆ ಸುಮಲತಾಗೆ ಬೆನ್ನೆಲುಬಾಗಿ ನಿಂತಿರುವ ದರ್ಶನ್​ನನ್ನು ಕಟ್ಟಿ ಹಾಕಿದ್ರೆ ಸುಮಲತಾ ಸುಮನ್ನೆ ಹಾಕ್ತಾರಾ ಅಥವಾ ಸಂಸದೆ ಸುಮಲತಾಗೆ ಟಕ್ಕರ್ ಕೊಡಲೂ ಮಾಜಿ ಸಿಎಂ ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ರಾ ಎಂಬುದು ಅನುಮಾನ ಮೂಡುತ್ತಿದೆ. ಇಂದ್ರಜಿತ್ ಲಂಕೇಶ್ ಮಾಜಿ ಸಿಎಂ ಕುಮಾರಸ್ವಾಮಿಯನ್ನು ಯಾವ ಕಾರಣಕ್ಕೆ ಭೇಟಿ ಮಾಡಿದರು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.

ಇಂದ್ರಜಿತ್ ಲಂಕೇಶ್-ಕುಮಾರಸ್ವಾಮಿ ಭೇಟಿ ಮಾಡಿರುವ ಫೋಟೋವೊಂದು ವೈರಲ್ ಆಗಿದೆ. ಹೀಗಾಗಿ ದರ್ಶನ್ ವಿರುದ್ಧದ ಆರೋಪದ ಹಿಂದೆ ಕುಮಾರಸ್ವಾಮಿ ಬೆಂಬಲ ಇಂದ್ರಜಿತ್ ಗಿದೆಯೇ ಎಂಬ ಅನುಮಾನ ಮೂಡಿಸಿದೆ. ಆದರೆ ಈಗ ಹರಿದಾಡುತ್ತಿರುವ ಫೋಟೋ ಈಗಿನದ್ದೇ ಅಥವಾ ಹಳೆಯ ಫೋಟೋವೇ ಎಂಬುದು ಸ್ಪಷ್ಟವಾಗಿಲ್ಲ.

RELATED TOPICS:
English summary :indrajit lankesh and HDK

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಪ್ರಮಾಣವಚನ ಬಳಿಕ ಮೊದಲ ಬಾರಿ ದೆಹಲಿಗೆ ಸಿಎಂ: ಪ್ರಧಾನಿ ಭೇಟಿಯಾಗಲಿರುವ ಬೊಮ್ಮಾಯಿ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ಕ್ಯಾಮ್ಸ್​​ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ನೆರೆರಾಜ್ಯ ಕೇರಳದಲ್ಲಿ 22,000 ಪ್ರಕರಣ ಪ್ರತಿದಿನ : ರಾಜ್ಯಕ್ಕೆ ಎಚ್ಚರಿಕೆಯ ಗಂಟೆ? | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯತಮನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ನಾಳೆ ದೆಹಲಿಗೆ ಸಿಎಂ ಪ್ರವಾಸ: ಸಿಎಂ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಪ್ರವಾಸ! | ಜನತಾ ನ್ಯೂ&#
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಮಾದಕ ವಸ್ತು ದಂಧೆ ಮಾಡುತ್ತಿದ್ದವರು ಅಂದರ್: 20 ಲಕ್ಷ ಮೌಲ್ಯದ ಅಫೀಮು ವಶ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಡಿಸಿಎಂ, ಸಚಿವ ಸ್ಥಾನ ಯಾವುದು ಕೊಟ್ಟರೂ ಬೇಡ ಅನ್ನಲ್ಲ: ಕೆ.ಎಸ್. ಈಶ್ವರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ: ಸಿದ್ದರಾಮಯ್ಯ | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
ಗಾಂಧಿಯ ಮಗ ಕುಡುಕನಾದ: ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ? | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#
60 ಕ್ಕೂ ಹೆಚ್ಚು ಮಂಗಗಳಿಗೆ ವಿಷಪ್ರಾಶನ ಮಾಡಿ, ಗೋಣಿಚೀಲದಲ್ಲಿ ಕಟ್ಟಿ ಎಸೆದ ದುಷ್ಕರ್ಮಿಗಳು | ಜನತಾ ನ್ಯೂ&#

ನ್ಯೂಸ್ MORE NEWS...