ಸರ್ವಿಸ್​ನಲ್ಲಿ ತಡವಾಗಿದೆ ಎಂದು ದರ್ಶನ್ ಕೋಪಗೊಂಡರು, ಆದರೆ ನನ್ನ ಮೇಲೆ ದರ್ಶನ್ ಹಲ್ಲೆ ಮಾಡಿಲ್ಲ | ಜನತಾ ನ್ಯೂಸ್

16 Jul 2021
524

ಮೈಸೂರು : ನನ್ನ ಮೇಲೆ ನಟ ದರ್ಶನ್ ಹಲ್ಲೆ ಮಾಡಿಲ್ಲ. ಸರ್ವಿಸ್​ನಲ್ಲಿ ತಡ ಆಗಿದ್ದಕ್ಕೆ ಬೈದರು ಅಷ್ಟೇ ಎಂದು ಹಲ್ಲೆ ಆರೋಪಕ್ಕೆ ಹೋಟೆಲ್​ ಸಪ್ಲೈಯರ್​ ಗಂಗಾಧರ್ ಹೇಳಿಕೆ ನೀಡಿದರು.

ಸ್ಯಾಂಡಲ್ ವುಡ್ ನಟ ದರ್ಶನ್ ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ಹೋಟೆಲ್ ಗೆ ಧಾವಿಸಿದ ಪೊಲೀಸರು ಸಂದೇಶ್ ಪ್ರಿನ್ಸ್ ಹೋಟೆಲ್ ಸಿಬ್ಬಂದಿಗಳಾದ ಗಂಗಾಧರ್, ಸಮೀರ್, ಪ್ರಸನ್ನ ಮತ್ತು ಆಕಾಶ್ ಎಂಬುವವರನ್ನ ವಿಚಾರಣೆ ಮಾಡಿದ್ದಾರೆ.

ನಟ ದರ್ಶನ್ ದಿ ಸಂದೇಶ್ ಪ್ರಿನ್ಸ್ ಹೋಟೆಲ್​ನಲ್ಲಿ ಗಂಗಾಧರ್ ಎಂಬ ಸರ್ವಿಸ್ ಮಾಡುವ ವ್ಯಕ್ತಿಯ ಮೇಲೆ ದೃಷ್ಟಿ ಹೋಗುವ ರೀತಿ ಹೊಡೆದಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಇತ್ತೀಚೆಗೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹೋಟೆಲ್​ಗೆ ಆಗಮಿಸಿದ ಎಸಿಪಿ ಶಶಿಧರ್ ನೇತೃತ್ವದ ತಂಡ ಗಂಗಾಧರ್ ಎಂಬ ವ್ಯಕ್ತಿಯಿಂದ ಮಾಹಿತಿ ಪಡೆದರು.

ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಗಂಗಾಧರ್ ಮಾತನಾಡಿ, ಮೊದಲಾಗಿ ನಾನು ದಲಿತನಲ್ಲ. ಕೇರಳದ ನಾಯರ್ ಜನಾಂಗಕ್ಕೆ ಸೇರಿದವನಾಗಿದ್ದೇನೆ. ಘಟನೆ ನಡೆದ ದಿನ ಸರ್ವಿಸ್​ನಲ್ಲಿ ತಡವಾಗಿದೆ ಎಂದು ದರ್ಶನ್ ಕೋಪಗೊಂಡರು, ಆದರೆ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದರು.

ಅಂದಹಾಗೆ ಇಂದ್ರಜಿತ್ ಲಂಕೇಶ್ ಹೇಳಿದ ಪ್ರಕಾರ ಇದೆ ಗಂಗಾಧರ ಅವರ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು, ಮರುದಿನ ಗಂಗಾಧರ್ ಅವರ ಹೆಂಡ್ತಿ ಪೊರಕೆ ಹಿಡಿದು ದರ್ಶನ್ ಮತ್ತು ಸ್ನೇಹಿತರನ್ನ ಪ್ರಶ್ನಿಸಲು ಹೋಟೆಲ್ ಗೆ ಬಂದಿದ್ದರು ಎಂದು ಆರೋಪಿಸಿದ್ದರು. ಆದರೆ ಈಗ ಮಾಧ್ಯಮದ ಮುಂದೆ ಖುದ್ದು ಸತ್ಯ ಬಿಚ್ಚಿಟಿರುವ ಗಂಗಾಧರ್ ನಾನು ಬ್ಯಾಚಲರ್ ಅದು ಯಾವ ಹೆಂಡ್ತಿ ಪೊರಕೆ ಹಿಡಿದುಕೊಂಡು ಬಂದಿದ್ದರೋ ಗೊತ್ತಿಲ್ಲ ಎಂದು ಹೇಳಿದ್ದಾರೆ

RELATED TOPICS:
English summary :Darshan

ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಆಡುವ ವೇಳೆ ಗಣೇಶ ಮೂರ್ತಿಯನ್ನೇ ನುಂಗಿದ ಮೂರು ವರ್ಷದ ಮಗು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂ&#
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ
ಇರುವಕ್ಕಿ ನೂತನ ಕೃಷಿ ಮತ್ತು ತೋಟಗಾರಿಕಾ ವಿವಿಗೆ "ಕೆಳದಿ ಶಿವಪ್ಪ ನಾಯಕ" ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ: ಸಿದ್ದರಾಮಯ್ಯ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
Tokyo Olympics: ವೇಯ್ಟ್​​​ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು! | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ‌ ಬೆಳಗಾವಿ ಪ್ರವಾಸ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ಬೈಕ್​ ಉಳಿಸಿಕೊಳ್ಳಲು ಹೋದ ಯುವಕ ತಾನೇ ಕೊಚ್ಚಿಹೋದ! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ:  9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ರಾಜ್ಯದಲ್ಲಿ ಇನ್ನೂ 3 ದಿನ ಮಳೆ: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್! | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಶವ ಪತ್ತೆ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#
ಭಾರೀ ಮಳೆ : ಉತ್ತರಕನ್ನಡ ಜಿಲ್ಲೆಯ ಅನೇಕ ಭಾಗ ಜಲಾವೃತ, ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ-63 ಬಂದ್ | ಜನತಾ ನ್ಯೂ&#

ನ್ಯೂಸ್ MORE NEWS...