ಮಂಗಳೂರು ರ್‍ಯಾಗಿಂಗ್‌ ಪ್ರಕರಣ: 6 ವಿದ್ಯಾರ್ಥಿಗಳ ಬಂಧನ | ಜನತಾ ನ್ಯೂಸ್

16 Jul 2021
514

ಮಂಗಳೂರು : ನಗರದ ಫಳ್ನೀರ್‌ನ ಇಂದಿರಾ ಕಾಲೇಜಿನಲ್ಲಿ ರ್‍ಯಾಗಿಂಗ್‌ ಪ್ರಕರಣ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳಾದ ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಜು.14ರಂದು ರಾತ್ರಿ 8 ಗಂಟೆಗೆ ನಗರದ ಫಳ್ನೀರ್ ರಸ್ತೆಯ ಹೊಟೇಲ್‌ವೊಂದಕ್ಕೆ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು (21) ಎಂಬವರು ತನ್ನ ಸ್ನೇಹಿತರಾದ ಜೋಬಿನ್ ಹಾಗೂ ಶಾಕೀರ್ ಅವರ ಜೊತೆಗೆ ಊಟಕ್ಕಾಗಿ ತೆರಳಿದ್ದಾರೆ.

ಈ ಸಮಯ ಪರಿಚಯಸ್ಥರಾದ ಇಂದಿರಾ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಲಾಲ್, ಜುರೈಜ್, ರಸೆಲ್ ಅವರ ಪೈಕಿ ಶ್ರೀಲಾಲ್ ಸಂತ್ರಸ್ತ ಮ್ಯಾನುಯಲ್‌ನ್ನು ಉದ್ದೇಶಿಸಿ, "ಏನು ಮುಖ ನೋಡುತ್ತಿಯಾ, ನೀವು ಜೂನಿಯರ್‌ಗಳು, ನಾವು ಬರುವಾಗ ಎದ್ದು ನಿಂತು ಗೌರವ ಕೊಡಬೇಕು" ಎಂದು ರ್‍ಯಾಗಿಂಗ್‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಂತರ ರಾತ್ರಿ 10:30ರ ಸುಮಾರಿಗೆ ಅತ್ತಾವರದ ಅಪಾರ್ಟ್‌ಮೆಂಟ್‌ನ ರೂಮಿನಲ್ಲಿ ಮ್ಯಾನುಯಲ್ ಇದ್ದ ಸಂದರ್ಭ ಆರು ಆರೋಪಿಗಳು ಮಾರಕಾಯುಧ ಸಹಿತ ಆಗಮಿಸಿದ್ದಾರೆ.

ಏಕಾಏಕಿ ರೂಮನ್ನು ಪ್ರವೇಶಿಸಿದ ಆರೋಪಿಗಳು ಈತನಿಗೆ ಪುನಃ ನಿಂದಿಸಿದ್ದಾರೆ. ಬಳಿಕ ಬಟ್ಟೆಗಳನ್ನು ತೆಗೆದು ಒಳವಸ್ತ್ರದಲ್ಲಿ ನಿಲ್ಲಲು, ಪದೇಪದೇ ಕುಳಿತುಕೊಳ್ಳಲು, ಎದ್ದುನಿಲ್ಲಲು ಹೇಳಿದ್ದಾರೆ. ಇದಕ್ಕೆ ಒಪ್ಪದೇ ಇದ್ದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ. ಅಲ್ಲದೆ, ಆರೋಪಿಗಳು ಜೀವ ಬೆದರಿಕೆಯನ್ನೂ ಒಡ್ಡಿದ್ದರು ಎನ್ನಲಾಗಿದೆ.

ಹಲ್ಲೆಯಿಂದ ಗಾಯಗೊಂಡಿದ್ದ ವಿದ್ಯಾರ್ಥಿಗಳು ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದಿದ್ದು, ಆರೋಪಿಗಳಿಗೆ ಹೆದರಿ ಆಸ್ಪತ್ರೆಯಿಂದ ತೆರಳಿದ್ದರು. ಮನೆಗೆ ಹೋಗಿ ತಿಳಿಸಿದಾಗ, ಪಾಲಕರು ದೂರು ಕೊಡುವಂತೆ ಸಲಹೆ ನೀಡಿದ್ದರು. ಅದರಂತೆ ರ್‍ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದರು.

RELATED TOPICS:
English summary :Mangalore

ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಬೆಂಗಳೂರಲ್ಲಿ ಹಾಡಹಗಲೇ ತಲೆ ಮೇಲೆ ಕಲ್ಲು ಹಾಕಿ ರೌಡಿಶೀಟರ್ ಭೀಕರ ಕೊಲೆ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ಎಸ್.ಆರ್. ಬೊಮ್ಮಾಯಿ ಗುಣ ಮಗನಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾನು ಸಂಪುಟ ಸೇರಲ್ಲ, ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ : ಜಗದೀಶ್ ಶೆಟ್ಟರ್ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
ನಾಳೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಹಪೀಡಿತ ಸ್ಥಳಗಳಿಗೆ ಬಸವರಾಜ ಬೊಮ್ಮಾಯಿ ಭೇಟಿ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
₹15 ಲಕ್ಷ ಲಂಚ ಪಡೆಯುತ್ತಿದ್ದಾಗ ಬೀದರ್ ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಪ್ರಿಯಕರನೊಂದಿಗೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ನೇಣಿಗೆ ಶರಣು! | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಸರಿಪಡಿಸಲಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ರೈತ ಮಕ್ಕಳಿಗೆ ವಿಶೇಷ ಶಿಷ್ಯವೇತನ, ನೂತನ ಸಿಎಂ ಬೊಮ್ಮಾಯಿ ಘೋಷಣೆ | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಶುಭಹಾರೈಸಿದ ಪ್ರಧಾನಿ ನರೇಂದ್ರ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ! | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#
ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...