Thu,Apr25,2024
ಕನ್ನಡ / English

ದೆಹಲಿ ಪ್ರವಾಸಕ್ಕೆ ಸಿಎಂ ಬಿಎಸ್​​ವೈ 6 ಬ್ಯಾಗ್ ಕೊಂಡೊಯ್ದಿದ್ದಾರೆ, ಏಕೆ?: ಎಚ್.ಡಿ. ಕುಮಾರಸ್ವಾಮಿ | ಜನತಾ ನ್ಯೂಸ್

17 Jul 2021
1641

ಬೆಂಗಳೂರು : ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ದೆಹಲಿ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಸಿಎಂ ನಿನ್ನೆ ದೆಹಲಿಗೆ ಹೋಗುವಾಗ ಆರು ಬ್ಯಾಗ್​ಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಹೈಕಮಾಂಡ್​​ಗೆ ಕೊಡುವುದಕ್ಕೆ ನಿನ್ನೆ ವಿಶೇಷ ವಿಮಾನದಲ್ಲಿ ಹೋಗುವಾಗ ಬ್ಯಾಗ್​ಗಳನ್ನು ತೆಗೆದುಕೊಂಡು ಹೋಗಿದ್ದಾರೆ ಅನ್ನುವ ಮಾಹಿತಿ ಇದೆ ಎಂದು ಹೆಚ್​ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ.

ಶನಿವಾರ ಇಲ್ಲಿನ ಜೆಪಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ಬಿಎಸ್‍ವೈ ಅವರು ವಿಶೇಷ ವಿಮಾನದಲ್ಲಿ ಆರು ಬ್ಯಾಗ್ ತೆಗೆದುಕೊಂಡು ಹೋಗಿದ್ದು, ಅವುಗಳಲ್ಲಿ ಉಡುಗೊರೆ ಇದೆಯೋ, ಬೇರೆ ಏನಾದರೂ ಇದೆಯೋ ಎನ್ನುವುದನ್ನು ಅವರೇ ಹೇಳಬೇಕು. ಆದರೆ, ಅವರು ಬ್ಯಾಗ್ ತೆಗೆದುಕೊಂಡು ಹೋಗಿರುವ ಮಾಹಿತಿ ನನಗೆ ಬಂದಿರುವುದಂತೂ ಹೌದು" ಎಂದು ತಿಳಿಸಿದರು.

ಪ್ರಧಾನಿಗಳನ್ನು ಭೇಟಿ ಮಾಡೋಕೆ ಸಿಎಂ ಒಬ್ಬರೇ ಹೋಗಿದ್ರಾ..? ಅಥವಾ ಬ್ಯಾಗ್​ಗಳನ್ನು ತೆಗೆದುಕೊಂಡು ಹೋಗಿ ಭೇಟಿ ಮಾಡಿದ್ರಾ..? ಎಂಬುದನ್ನು ಸಿಎಂ ಸ್ಪಷ್ಟಪಡಿಸಬೇಕು ಎಂದು ಅವರು ಇದೇ ವೇಳೆ ಹೇಳಿದರು.

ಸಂಸದೆ ಸುಮಲತಾ ಅಂಬರೀಶ್ ರಾಜ್ಯಪಾಲರ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರ ಬಗ್ಗೆ ನಾನು ಮಾತನಾಡೋದಿಲ್ಲ. ರಾಜ್ಯಾದ್ಯಂತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅಕ್ರಮ ಗಣಿಗಾರಿಕೆ ಬಗ್ಗೆ ಈ ಹಿಂದೆ ಹಲವಾರು ಬಾರಿ ಪ್ರಸ್ತಾಪ ಮಾಡಿದ್ದೆ. ಅಕ್ರಮ ಗಣಿಗಾರಿಕೆ ವಿರುದ್ಧ ಯಾರೇ ನಾಯಕರು ಹೋರಾಡಿದರೂ ವೈಯಕ್ತಿಕವಾಗಿ ನಾನು ಹಾಗೂ ನಮ್ಮ ಪಕ್ಷ ಬೆಂಬಲ ನೀಡಲಿದೆ ಎಂದರು.

ಮೇಕೆದಾಟು ಮತ್ತು ಮಹದಾಯಿ ಯೋಜನೆಯ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚರ್ಚೆಯನ್ನೆ ಮಾಡಿಲ್ಲ ಎಂಬುದು ಬಹಿರಂಗವಾಗಿದೆ. ಆದರೆ, ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯ ಬಗ್ಗೆ ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ಸರಿಯಲ್ಲ ಎಂದು ಆಕ್ಷೇಪಿಸಿದ ಕುಮಾರಸ್ವಾಮಿ, ಕೇಂದ್ರ ಸಚಿವ ರಾಜ್ಯಕ್ಕೆ ಬಂದಿದ್ದು ಜಲಜೀವನ್ ಮೀಷನ್ ಯೋಜನೆ ಅನುಷ್ಠಾನ ಸಂಬಂಧ ಎಂದು ಹೇಳಿದರು.

RELATED TOPICS:
English summary :HD Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...