Sat,Apr27,2024
ಕನ್ನಡ / English

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಿಗೆ ಕೊರೊನಾ ಸೋಂಕು | ಜನತಾ ನ್ಯೂಸ್

18 Jul 2021
2136

ಬೆಂಗಳೂರು : ಸಾಂಕ್ರಾಮಿಕ ಕೊರೊನಾ ಸೋಂಕಿನ ನಡುವೆಯೂ ಭವಿಷ್ಯದ ಪರೀಕ್ಷೆ ಬರೆಯಲು ಎಸ್ಎಸ್ಎಲ್​​ಸಿ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಇತ್ತ ಯಾವುದೇ ಅಡಚಣೆ ಆಗದಂತೆ ಕ್ರಮವಹಿಸಲು ಎಸ್ಎಸ್ಎಲ್‌ಸಿ ಬೋರ್ಡ್ ಹಾಗೂ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕರ್ನಾಟಕದಲ್ಲಿ ನಾಳೆಯಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭವಾಗಲಿದ್ದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯಬೇಕಿದ್ದ 23 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಈ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಮಾಹಿತಿ ನೀಡಿದ್ದಾರೆ.

ಜುಲೈ.19ರ ನಾಳೆ ಮತ್ತು ಜುಲೈ.22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯ ನಡುವೆ ನಡೆಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಶುಭ ಹಾರೈಕೆಗಳು. ಎಲ್ಲರೂ ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ ಎಂದು ಪಾಲಕರಿಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳು ಸಂಚಾರಿಸಲು ನಾಲ್ಕು ನಿಗಮಗಳಿಂದಲೂ ಉಚಿತ ಬಸ್‌ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ( ಹಾಲ್ ಟಿಕೆಟ್ ) ತೋರಿಸಿದರೆ ಉಸಿತವಾಗಿ ಸಂಚರಿಸಬಹುದಾಗಿದೆ. ಹಾಗೇ ವಿದ್ಯಾರ್ಥಿಗಳು ಯಾವುದೇ ಸ್ಥಳದಲ್ಲಿ ಕೋರಿದ್ದಲ್ಲಿ ಬಸ್‌ನ ನಿಲ್ಲಿಸಬಹುದಾಗಿದೆ.

ಅಂತಿಮ ಹಂತದ ತಯಾರಿಯನ್ನು ಮಾಡಿಕೊಂಡಿದ್ದು, ವಿಶೇಷವಾಗಿ ಈ ಬಾರಿ ಹೆಚ್ಚುವರಿಯಾಗಿ 32 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 8,76,508 ಮಕ್ಕಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ಪೋಷಕರು ಮಕ್ಕಳನ್ನ ಧೈರ್ಯವಾಗಿ ಕಳುಹಿಸಿ ಪರೀಕ್ಷೆ ಬರೆಯುವಂತೆ ಉತ್ತೇಜಿಸುವಂತೆ ಮನವಿ ಮಾಡಿದರು.

ಕೆಮ್ಮು, ನೆಗಡಿ, ಜ್ವರ, ಮೊದಲಾದ ಅನಾರೋಗ್ಯ ಸಮಸ್ಯೆಗಳು ಇದ್ದರೆ ಅಂತಹವರಿಗೆ ವಿಶೇಷ ಕೊಠಡಿ ಸೌಲಭ್ಯ ಇರಲಿದೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುತ್ತಿದ್ದಂತೆ ಆರೋಗ್ಯ ತಪಾಸಣೆಯು ಬೆಳಗ್ಗೆ 8-30ಕ್ಕೆ ಶುರುವಾಗಲಿದೆ‌. ಥರ್ಮಲ್ ಸ್ಕ್ಯಾನಿಂಗ್, ಪಲ್ಸ್ ಆಕ್ಸಿಮೀಟರ್, ಮಾಸ್ಕ್ ವ್ಯವಸ್ಥೆ ಇವೆಲ್ಲವೂ ಇರಲಿದೆ. ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡಲಾಗುತ್ತಿದೆ.

RELATED TOPICS:
English summary :SSLC EXAM

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...