Thu,Apr25,2024
ಕನ್ನಡ / English

ದುಡ್ಡು ಹೊಡೆಯಲು ಯೋಜನೆಗಳಿಗೆ ಸಿಎಂ ಅನುಮತಿ: ಹೆಚ್‍ಡಿಕೆ ಆರೋಪ | ಜನತಾ ನ್ಯೂಸ್

22 Jul 2021
2987

ಮಂಡ್ಯ : ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುತ್ತಾರೆ, ಹೀಗಿರುವಾಗ ತರಾತುರಿಯಲ್ಲಿ ನೀರಾವರಿ ಇಲಾಖೆಯ ನಾಲ್ಕು ನಿಗಮಗಳಿಗೆ 12 ಸಾವಿರ ಕೋಟಿ ಯೋಜನೆಗೆ ಅನುಮತಿ ನೀಡುತ್ತಿರುವುದು ದುಡ್ಡು ಹೊಡೆಯುವುದಕ್ಕಾಗಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಬಿಎಸ್‍ವೈ ವಿರುದ್ಧ ಆರೋಪ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಯಡಿಯೂರಪ್ಪ ಅವರು ಕೆಲವೇ ದಿನಗಳಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳುತ್ತಿದ್ದಾರೆ. ಹೀಗಿರುವ ಸಮಯಲ್ಲಿ ಇದ್ದಕ್ಕಿದ್ದ ಹಾಗೆ ದಿಢೀರನೆ ನೀರಾವರಿ ಇಲಾಖೆಗೆ 12 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ನೀಡಿರುವುದು ಅನುಮಾನಗಳನ್ನು ಹುಟ್ಟು ಹಾಕಿದೆ. ಯೋಜನೆಗೆ ಅನುಮತಿ ನೀಡುತ್ತಿರುವುದು ಯಾಕೆ?, ಅವರಿಗೆ ಅಂಥ ಅನಿವಾರ್ಯ ಏನಿದೆ?, ಯಾವ ಕಾರಣಕ್ಕಾಗಿ ಈ ತೀರ್ಮಾನ?, ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ? ಎಂದು ಖಾರವಾಗಿ ಪ್ರಶ್ನಿಸಿದರು.

ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಿರುವ ವಿಚಾರ ನನಗೆ ಸಂಬಂಧಿಸಿದ್ದಲ್ಲ. ಅದು ಬಿಜೆಪಿ ಆಂತರಿಕ ವಿಚಾರವಾಗಿದೆ. ಅವರ ಪಕ್ಷದ ನಿರ್ಧಾರದಲ್ಲಿ ನಾನು ಮೂಗು ತೂರಿಸುವುದು ಶೋಭೆ ತರುವುದಿಲ್ಲ. ಯಡಿಯೂರಪ್ಪ ಅವರಿಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ ಎಂದರು.

ಸದ್ಯ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂಥ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಆದಷ್ಟು ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ಸಲಹೆ ನೀಡಿದರು.

ಸರ್ಕಾರಕ್ಕೆ ಹಳೆ ಕರ್ನಾಟಕದಿಂದಲೇ ಹೆಚ್ಚಿನ ಪ್ರಮಾಣದ ತೆರಿಗೆ ಬರುತ್ತದೆ. ಹೀಗಿರುವಾಗ ಹಳೆ ಕರ್ನಾಟಕಕ್ಕೆ ಕೇವಲ 1 ಸಾವಿರ ಕೋಟಿಯನ್ನು ಮಾತ್ರ ಮಂಜೂರು ಮಾಡಿದ್ದಾರೆ. ನಮಗೆ ಹಳೆಯದ್ದು ಹಾಗೂ ಹೊಸ ಕರ್ನಾಟಕ ಎಂದು ನಾನು ಹೇಳುವುದಿಲ್ಲ. ಆ ಭಾಗಕ್ಕೆ ಆದ್ಯತೆ ನೀಡುವ ರೀತಿ ಈ ಭಾಗಕ್ಕೂ ಆದ್ಯತೆ ನೀಡಿ, ಇಲ್ಲಿನ ಜನರು ನಿಮಗೇನು ದ್ರೋಹ ಮಾಡಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ಹೆಚ್‍ಡಿಕೆ ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಜಾತಿ ಇಲ್ಲ. ರಾಜ್ಯದ ಜನ ನನ್ನನ್ನ ಜಾತಿಯಿಂದ ಗುರುತಿಸಿಲ್ಲ. ನನ್ನಲ್ಲಿರುವ ತಾಯಿ ಹೃದಯದಿಂದ ಜನ ನನ್ನನ್ನ ಗುರುತಿಸಿದ್ದಾರೆ. ನಾನು ಜಾತಿಯ ಹೆಸರಲ್ಲಿ ರಕ್ಷಣೆ ಪಡೆಯುವುದಿಲ್ಲ. ನನಗೂ ಬೇರೆ ರಾಜಕಾರಣಿಗಳಿಗೂ ವ್ಯತ್ಯಾಸ ಇದೆ. ಜಾತಿ ಹೆಸರಿನಿಂದ ಪಕ್ಷ ಕಟ್ಟಲು ನಾನು ಹೋಗುವುದಿಲ್ಲ ಎಂದರು.

RELATED TOPICS:
English summary :HDK

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ನ್ಯೂಸ್ MORE NEWS...