ಪ್ರವಾಹ ಪರಿಸ್ಥಿತಿ ಅವಲೋಕನ: ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಬೆಳಗಾವಿ ಪ್ರವಾಸ! | ಜನತಾ ನ್ಯೂಸ್
ಬೆಳಗಾವಿ : ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿಯವರ ಕಚೇರಿ, "ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ" ಎಂದು ತಿಳಿಸಿದೆ.
RELATED TOPICS:
English summary : Flood Situation Overview: Chief Minister Yeddyurappa to visit Belgaum tomorrow!