Wed,May08,2024
ಕನ್ನಡ / English

ಬಾಕಿ ಪರಿಹಾರ ಬಿಡುಗಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ | ಜನತಾ ನ್ಯೂಸ್

25 Jul 2021
2850

ಬೆಳಗಾವಿ : ಕಳೆದ ಬಾರಿ ಪ್ರವಾಹ ಉಂಟಾಗಿದ್ದ ಸಂದರ್ಭದಲ್ಲಿ ಮನೆ ಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದರು.

ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ರವಿವಾರ ನಗರದ ಪ್ರವಾಸಿಮಂದಿರದಲ್ಲಿ ನಡೆದ ಅತಿವೃಷ್ಟಿ/ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ. ಎರಡು-ಮೂರು ದಿನಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಜನರ ಕಷ್ಟಗಳನ್ನು ಅರಿತು ಜಿಲ್ಲಾಡಳಿತ ಸಂವೇದನೆಯಿಂದ ಕೆಲಸ ಮಾಡಬೇಕು ಎಂದರು.

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಿಗೆ ಯಡಿಯೂರಪ್ಪ ಸೂಚನೆ ನೀಡಿದರು.

ಬೆಳಗಾವಿ ವಿಭಾಗದಲ್ಲಿ 1,400 ಕಿ.ಮೀ. ರಸ್ತೆ ಹಾನಿಯಾಗಿದೆ. 305 ಸೇತುವೆ ಹಾನಿ ಸೇರಿ ಒಟ್ಟಾರೆ 1,200 ಕೋಟಿ ರೂ.ಹಾನಿಯಾಗಿದ್ದು, ತಕ್ಷಣ ದುರಸ್ತಿಗೆ 170 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಇದೇ ವೇಳೆ ಮನವಿ ಮಾಡಿಕೊಂಡರು.

ಕಳೆದ ಬಾರಿ ಶಾಶ್ವತ ಪುನರ್ವಸತಿ ಕಲ್ಪಿಸಿ ವಿತರಿಸಲಾಗಿರುವ ಮನೆಗಳಿಗೆ ಇದುವರೆಗೆ ಖಾಲಿಯಿರುವ ಮನೆಗಳನ್ನು ಅಗತ್ಯತೆ ಆಧರಿಸಿ ಬೇರೆಯವರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಕೃಷ್ಣಾ ನದಿಯಲ್ಲಿ ಈಗಲೂ ನೀರಿನ ಹರಿವು ಜಾಸ್ತಿ ಇರುವುದರಿಂದ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ಕಳೆದ ಬಾರಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳು ಹಾಗೂ ಸೇತುವೆಗಳ ದುರಸ್ತಿಗೆ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಕೋರಿದರು.

RELATED TOPICS:
English summary :BSYediyurappa

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...