ಕೆರೆಗೆ ಉರುಳಿದ ಕೆಎಸ್ಆರ್ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂಸ್
ಶಿವಮೊಗ್ಗ : ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.
ಎದುರಿನಿಂದ ಬಂದ ಬೈಕ್ಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆಯ ಪಕ್ಕದಲ್ಲಿದ್ದ ಕೆರೆಗೆ ಉರುಳಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
RELATED TOPICS:
English summary :Shivamogga, Sagar