ಹುಬ್ಬಳ್ಳಿ ಮಗು ಅಪಹರಣ ಪ್ರಕರಣ: ಆರೋಪಿ ಬಂಧನ, ಬಾಲಕಿ ರಕ್ಷಣೆ | ಜನತಾ ನ್ಯೂಸ್

02 Aug 2021
592

ಹುಬ್ಬಳ್ಳಿ : ರಾಮಲಿಂಗೇಶ್ವರ ನಗರದಲ್ಲಿ ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಮಗುವನ್ನು ಗೋಕುಲ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿಯ ನಿವಾಸಿ ಶಬನಂ ಗದಗಕರ ಬಂಧಿತ ಯುವತಿ. ಶನಿವಾರ ಮಧ್ಯಾಹ್ನ ಪಕ್ಕದ ಮನೆಯಲ್ಲಿದ್ದ ಅಸ್ಲಾಂ ಬಳ್ಳಾರಿ ಎನ್ನುವವರ ಮಗುವನ್ನು ಮಾರುಕಟ್ಟೆಗೆ ಕರೆದುಕೊಂಡು ಹೋಗಿ ಬರುವುದಾಗಿ ಹೇಳಿ ಶಬನಂ ನಾಪತ್ತೆಯಾಗಿದ್ದಳು.

ಬಳಿಕ ಅಸ್ಲಾಂ ಅವರು ಗೋಕುಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತಕ್ಷಣ ತನಿಖೆ ಆರಂಭಿಸಿದ ಪೊಲೀಸರು ಮೊಬೈಲ್ ಟವರ್ ಆಧಾರದಲ್ಲಿ ಆರೋಪಿ ಬೆಂಗಳೂರಿನಲ್ಲಿ ಇರುವುದಾಗಿ ತಿಳಿದ ಮೇಲೆ ವಿಶೇಷ ತಂಡ ರಚಿಸಿ ಪತ್ತೆ ಕಾರ್ಯಕ್ಕೆ ಇಳಿದಿದ್ದರು.

ಶಬನಂ ಬೆಂಗಳೂರಿನ ಯುವಕನನ್ನು ಮದುವೆಯಾಗಿ, ವಿಚ್ಛೇದನ ಪಡೆದು ಮಂಡ್ಯದ ವ್ಯಕ್ತಿಯ ಜೊತೆ ಸ್ನೇಹದಲ್ಲಿರುವುದು ತಿಳಿದು ಬಂದಿತ್ತು. ಶಬನಂ ಮಗುವಿನ ಜೊತೆ ಅವನಲ್ಲಿಗೆ ತೆರಳುತ್ತಿರುವ ಮಾಹಿತಿ ಆಧರಿಸಿ, ಪೊಲೀಸರು ಅವನನ್ನು ಸಂಪರ್ಕಿಸಿ ಸಹಕಾರ ಕೋರಿದ್ದರು. ಆಗ, ಅವನು ಶಬನಂಗೆ ಮೆಜೆಸ್ಟಿಕ್ ಬಸ್ ನಿಲ್ದಾಣದ ಆರನೇ ಪ್ಲಾಟ್ ಫಾರ್ಮ್ ನಲ್ಲಿ ಇರಲು ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದ.

ಅದೇ ವೇಳೆ ಕಮಿಷನರ್ ಲಾಬೂರಾಮ್, ಬೆಂಗಳೂರಿನ ಚಿಕ್ಕಪೇಟೆ ಎಸಿಪಿ ಹಾಗೂ ಉಪ್ಪಾರಪೇಟೆ ಪೊಲೀಸ್ ಸಿಬ್ಬಂದಿ ಸಹಾಯ ಕೇಳಿ, ಮಗು ಹಾಗೂ ಆರೋಪಿ ಫೋಟೊವನ್ನು ಅವರಿಗೆ ವಾಟ್ಸ್​ಆ್ಯಪ್​ ಮಾಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಬೆಂಗಳೂರು ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ಗೋಕುಲ ಠಾಣೆ ಪೊಲೀಸರು ಮಗುವನ್ನು ಹುಬ್ಬಳ್ಳಿಗೆ ಕರೆತಂದಿದ್ದಾರೆ. ಘಟನೆಯ ಕುರಿತು ಹುಬ್ಬಳ್ಳಿಯ ಗೋಕುಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Hubli

ಉರಿ ಬಳಿ 3 ಭಯೋತ್ಪಾದಕರ ನಿರ್ಮೂಲನೆ ಮಾಡಿ, ಶಸ್ತ್ರಾಸ್ತ್ರ ವಶಕ್ಕೆ ಪಡೆದ ಭಾರತೀಯ ಪಡೆ | ಜನತಾ ನ್ಯೂ&#
ಉರಿ ಬಳಿ 3 ಭಯೋತ್ಪಾದಕರ ನಿರ್ಮೂಲನೆ ಮಾಡಿ, ಶಸ್ತ್ರಾಸ್ತ್ರ ವಶಕ್ಕೆ ಪಡೆದ ಭಾರತೀಯ ಪಡೆ | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#

ನ್ಯೂಸ್ MORE NEWS...