ಹಾಡಹಗಲೇ ವೃದ್ಧನ ಕತ್ತು ಸೀಳಿ ಬರ್ಬರ ಹತ್ಯೆ | ಜನತಾ ನ್ಯೂಸ್

03 Aug 2021
600

ಬೆಳಗಾವಿ : ನಗರದ ವಡಗಾವಿಯ ಯಳ್ಳೂರು ಕ್ರಾಸ್ ಬಳಿ ಭೀಕರ ಹತ್ಯೆ ನಡೆದಿದೆ. ಮೂಲತಃ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ನಿವಾಸಿ ಮಹಾದೇವ ಮಾರುತಿ ಜಾಧವ್ ಎಂಬ 55 ವರ್ಷ ವಯಸ್ಸಿನ ವೃದ್ಧನ ಕತ್ತು ಸೀಳಿ ಕೊಲೆ ಮಾಡಲಾಗಿದೆ.

ಬೆಳಗಾವಿ ತಾಲೂಕಿನ ಅಂಬೆವಾಡಿ ಗ್ರಾಮದ ಮಹಾದೇವ ಮಾರುತಿ ಜಾಧವ್ (50) ಕೊಲೆಯಾದ ಕಾರ್ಮಿಕ. ಗೌಂಡಿ ಕೆಲಸ ಮಾಡುತ್ತಿದ್ದ ಮಹಾದೇವ, ಕೆಲಸದ ನಿಮಿತ್ತ ವಡಗಾವಿಯ ಭಾರತ ನಗರದ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಮಹಾದೇವ ಅವರ ಕುಟುಂಬ ಅಂಬೆವಾಡಿ ಗ್ರಾಮದಲ್ಲಿ ನೆಲೆಸಿದ್ದು, ಇವರು ವಾಸವಿದ್ದ ಬಾಡಿಗೆ ಮನೆ ಪಕ್ಕವೇ ಸಹೋದರಿಯ ಮನೆಯೂ ಇದೆ.

ಮಹಾದೇವ ಜಾಧವ್ ನಿನ್ನೆ ಕೆಲಸಕ್ಕೆ ರಜೆ ಇದೆ, ಹೊರಗೆ ಹೋಗಿ ಬರ್ತೀನಿ ಅಂತಾ ತಂಗಿಗೆ ಹೇಳಿ ತೆರಳಿದ್ದ. ಹೀಗೆ ಹೋಗಿದ್ದ ಆತ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ವಡಗಾವಿಯ ಯಳ್ಳೂರು ಕ್ರಾಸ್ ಬಳಿ ಆಟೋ ನಿಲ್ದಾಣದ ಹತ್ತಿರ ರಕ್ತದ ಮಡುವಿನಲ್ಲಿ ಹೆಣವಾಗಿ ಬಿದ್ದಿದ್ದ. ಈ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಇಬ್ಬರು ಅಪರಿಚಿತರು, ನಡುರಸ್ತೆಯಲ್ಲೇ ಮಹಾದೇವನನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.

ಅಸಲಿಗೆ ಮಹಾದೇವ ಜಾಧವ್ ಜೊತೆ ಕೆಲಸ ಮಾಡ್ತಿದ್ದ ಸೂರಜ್ ಎಂಬಾತನ ಬಳಿ ಎರಡು ಸಾವಿರ ರೂಪಾಯಿ ಹಣ ಸಾಲ ಪಡೆದಿದ್ದನಂತೆ. ಎರಡು ಸಾವಿರ ರೂಪಾಯಿ ವಾಪಸ್ ನೀಡುವಂತೆ ಕೇಳಿದರೂ ಕೊಡ್ತಿರಲಿಲ್ವಂತೆ. ಇಂದು ಬೆಳಗ್ಗೆ ಯಳ್ಳೂರು ಕ್ರಾಸ್ ಬಳಿ ತೆರಳುತ್ತಿದ್ದ ಮಹಾದೇವ ಜಾಧವ್ ಬಳಿ ಸೂರಜ್ ತಾನು ನೀಡಿದ ಹಣ ವಾಪಾಸ್ ನೀಡುವಂತೆ ಕೇಳಿದ್ದಾನಂತೆ.

ಈ ವೇಳೆ ಇಬ್ಬರ ಮಧ್ಯೆ ವಾಗ್ವಾದ ನಡೆದು ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿ ಸೂರಜ್ ತನ್ನ ಬಳಿ ಇದ್ದ ರೇಡಿಯಮ್ ಕಟರ್‌ನಿಂದ ಮಹಾದೇವ ಜಾಧವ್ ಕತ್ತು ಸೀಳಿ ಪರಾರಿಯಾಗಿದ್ದಾನೆ. ಈ ವೇಳೆ ಸ್ಥಳದಲ್ಲೇ ಕುಸಿದು ಬಿದ್ದ ಮಹಾದೇವ ಜಾಧವ್ ವಿಲವಿಲ ಒದ್ದಾಡಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ ಎನ್ನಲಾಗಿದೆ.

ಕೇವಲ 2ಸಾವಿರ ರೂಪಾಯಿಗಾಗಿ ವ್ಯಕ್ತಿಯ ಹತ್ಯೆ ನಡೆದಿರೋದು ಜನ ಬೆಚ್ಚಿಬೀಳುವಂತೆ ಮಾಡಿದೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

RELATED TOPICS:
English summary :Belagavi

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...