ಬಿರಿಯಾನಿ ಊಟ: ವರ್ತೂರ್ ಪ್ರಕಾಶ್ ಸೇರಿದಂತೆ 105 ಮಂದಿ ವಿರುದ್ಧ ಎಫ್ಐಆರ್ | ಜನತಾ ನ್ಯೂಸ್
ಕೋಲಾರ : ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ವರ್ತೂರ್ ಪ್ರಕಾಶ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ತೂರ್ ಪ್ರಕಾಶ್ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಕರ್ನಾಟಕ ಎಪಿಡೆಮಿಕ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಮ್ಮ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್ ಎ-1, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸೂಲೂರು ಅಂಜಿನಪ್ಪ ಎ-2, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್ ಎ-3, ಮಾಜಿ ಸಚಿವ ವರ್ತೂರು ಪ್ರಕಾಶ್ ಎ-4 ಆರೋಪಿಗಳು ಎಂದು ಎಫ್‌ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ ಚೊಕ್ಕ ಕನ್ವೆನ್ಷನ್ ಹಾಲ್ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು.
ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ