ರಾಜ್ಯ ಸಚಿವ ಸಂಪುಟ : ಪ್ರತಿಜ್ಞಾವಿಧಿ ಸ್ವಿಕರಿಸಿದ 29 ಮಂತ್ರಿಗಳು | ಜನತಾ ನ್ಯೂಸ್

04 Aug 2021
452

ಬೆಂಗಳೂರು : ಇಂದು ಮಧ್ಯಾಹ್ನ ಕರ್ನಾಟಕದ ಹೊಸ ಸಚಿವ ಸಂಪುಟದಲ್ಲಿ 29 ಸಚಿವರನ್ನು ಸೇರಿಸಿಕೊಳ್ಳಲಾಗಿದೆ. ರಾಜಭವನದಲ್ಲಿ ಮಧ್ಯಾಹ್ನ 2:15 ರ ಸುಮಾರಿಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ 29 ಮಂತ್ರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಈ ಬಾರಿ ಉಪಮುಖ್ಯಮಂತ್ರಿಗಳು ಇರುವುದಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲೇ ಘೋಷಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಿರಿಯ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಿದವರಲ್ಲಿ ಇಲ್ಲ, ಎಂದು ಅವರು ಹೇಳಿದರು.

"ಕ್ಯಾಬಿನೆಟ್ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಹೈಕಮಾಂಡ್ ಜೊತೆ ವಿವರವಾದ ಚರ್ಚೆಗಳನ್ನು ನಡೆಸಲಾಯಿತು, ನಿನ್ನೆ ರಾತ್ರಿ ಅಂತಿಮ ಸುತ್ತಿನ ಚರ್ಚೆಯ ನಂತರ, ಇಂದು ಬೆಳಿಗ್ಗೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಪ್ರಮಾಣವಚನ ಸಮಾರಂಭದ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, "ಒಟ್ಟು 29 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಮತ್ತು ಬಿಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು, ಆದರೆ ಈ ಬಾರಿ ಹೈಕಮಾಂಡ್ ನಿರ್ದೇಶನದ ಅನುಸಾರ, ಉಪಮುಖ್ಯಮಂತ್ರಿ ಸ್ಥಾನ ಯಾರಿಗೂ ಇರುವುದಿಲ್ಲ, ಎಂದು ತಿಳಿಸಿದ್ದಾರೆ.

"ಕ್ಯಾಬಿನೆಟ್ ಅನುಭವ ಮತ್ತು ಹೊಸ ಶಕ್ತಿ ಎರಡರ ಮಿಶ್ರಣವಾಗಿರುತ್ತದೆ" ಎಂದು ಅವರು ಹೇಳಿದ ಅವರು, ಕ್ಯಾಬಿನೆಟ್‌ನಲ್ಲಿ 7 ಒಬಿಸಿ, 3 ಎಸ್‌ಸಿ, 1 ಎಸ್‌ಟಿ, 7 ವೊಕ್ಕಲಿಗ, 8 ​​ಲಿಂಗಾಯತ, 1 ರೆಡ್ಡಿ, ಅವರಲ್ಲಿ ಒಬ್ಬ ಮಹಿಳೆಯೂ ಇದ್ದಾರೆ, ಎಂದಿದ್ದರು.

ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳೆಂದರೆ ವಿ ಸುನೀಲ್ ಕುಮಾರ್ (ಕಾರ್ಕಳ), ಆರಗ ಜ್ಞಾನೇಂದ್ರ (ತೀರ್ಥಹಳ್ಳಿ), ಮುನಿರತ್ನ (ಆರ್ ಆರ್ ನಗರ), ಹಾಲಪ್ಪ ಆಚಾರ್ (ಯಲಬುರ್ಗಾ), ಶಂಕರ್ ಪಾಟೀಲ್ ಮುನೇನಕೊಪ್ಪ (ನವಲಗುಂದ) ಮತ್ತು ಬಿ ಸಿ ನಾಗೇಶ್ (ತಿಪಟೂರು) ಇಂದು ಪ್ರಮಾಣ ವಚನ ಸ್ವಿಕರಿಸಿದ್ದಾರೆ.

RELATED TOPICS:
English summary :State cabinet : 29 ministers take oath

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...