ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಅಗತ್ಯವಿಲ್ಲ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

05 Aug 2021
418

ಬೆಂಗಳೂರು : ಮೇಕೆದಾಟು ಅಣೆಕಟ್ಟು ಯೋಜನೆ ವಿಚಾರದಲ್ಲಿ ರಾಜ್ಯ ಸರಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯೋಜನೆಗೆ ತಮಿಳುನಾಡು ಒಪ್ಪಿಗೆ ಅಗತ್ಯವಿಲ್ಲ. ಅಣ್ಣಾಮಲೈ ಉಪವಾಸನಾದರೂ ಮಾಡಲಿ, ಊಟ ಬೇಕಾದರೂ ಮಾಡಲಿ. ಮೇಕೆದಾಟು ಯೋಜನೆ ನೆರವೇರುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ತಮಿಳುನಾಡಿನಲ್ಲಿ ರಾಜಕೀಯ ಕಾರಣಕ್ಕಾಗಿ ಈ ಯೋಜನೆಯನ್ನು ವಿರೋಧಿಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆ ಹಾಗೂ ಸಂಕಷ್ಟ ಕಾಲದಲ್ಲಿ ಉಭಯ ರಾಜ್ಯಗಳಿಗೆ ನೀರು ಹಂಚಿಕೆಗಾಗಿ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಯೋಜನೆ ಇದಾಗಿದೆ ಎಂದು ತಮಿಳುನಾಡಿನವರಿಗೆ ಗೊತ್ತಿದೆ ಎಂದರು.

ಮೇಕೆದಾಟು ಯೋಜನೆ ಕುಡಿಯುವ ನೀರಿನ ಯೋಜನೆಯಾಗಿದ್ದು, ಈ ವಿಚಾರವನ್ನು ತಮಿಳುನಾಡು ಅನಗತ್ಯ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಅಲ್ಲಿ ಯಾವುದೇ ಪಕ್ಷದವರು ಇರಬಹುದು, ಅವರು ರಾಜಕಾರಣಕ್ಕಾಗಿ ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದು, ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದೇನೆ. ರಾಜ್ಯದ ಸಂಸದರ ನಿಯೋಗದ ಜೊತೆಗೂ ಭೇಟಿ ಮಾಡಿ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಒತ್ತಾಯ ಮಾಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಗಾಗಲೇ ಮೇಕೆದಾಟು ಯೋಜನೆಯ ಸಮಗ್ರ ವಿಸ್ಕೃತ ಯೋಜನೆಗೆ (ಡಿಪಿಆರ್) ಶೀಘ್ರದಲ್ಲಿ ಅನುಮತಿ ಸಿಗುವ ವಿಶ್ವಾಸವಿದೆ. ಇತರ ಎಲ್ಲದಕ್ಕೂ ಅನುಮತಿ ಸಿಗಲಿದೆ. ಕೇಂದ್ರದ ಒಪ್ಪಿಗೆ ಸಿಕ್ಕ ತಕ್ಷಣ ಯೋಜನೆ ಕಾಮಗಾರಿ ಆರಂಭಿಸುವುದು ಶತಸಿದ್ಧ. ಅದರಲ್ಲಿ ಯಾವುದೇ ರಾಜಿ ಇಲ್ಲ ಎಂದ ಬಸವರಾಜ ಬೊಮ್ಮಾಯಿ, ಜನೆ ವಿರೋಧಿಸಿ ಯಾರಾದರೂ ಪ್ರತಿಭಟನೆ ಮಾಡುತ್ತಿದ್ದರೆ ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದರು.

ಅಣ್ಣಾಮಲೈ ಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ. ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡಿದರೆ, ಐ ಡೋಂಟ್‌ ಕೇರ್‌. ಅನುಮತಿ ತೆಗೆದುಕೊಂಡು ಮಾಡೇ ತೀರುತ್ತೇವೆ. ತಮಿಳುನಾಡು ಹಿಂದಿನಿಂದಲೂ ಕರ್ನಾಟಕದ ಎಲ್ಲ ಯೋಜನೆಗಳಿಗೂ ಅಡ್ಡಿ ಮಾಡುತ್ತಲೇ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

RELATED TOPICS:
English summary :Basavaraj bommai

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...