Sat,Apr20,2024
ಕನ್ನಡ / English

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ | ಜನತಾ ನ್ಯೂಸ್

05 Aug 2021
2235

ಬೆಂಗಳೂರು : ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು.

ಇಂದು ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷವನ್ನು ಪ್ರತಿನಿಧಿಸುವ ಕೇಸರಿ ಶಾಲು ಹೊದಿಸಿ ಎನ್‌.ಮಹೇಶ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.

ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದ್ದು, ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿಯವರಾದ ನರೇಂದ್ರ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು.

2018ರ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಮಹೇಶ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದರು.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಎಸ್‌ಪಿ ರಾಜ್ಯದಲ್ಲಿ ಚುನಾವಣೆ ಎದುರಿಸಿತ್ತು. 71,792 ಮತಗಳನ್ನು ಪಡೆದು ಎನ್. ಮಹೇಶ್ ಗೆಲುವು ಸಾಧಿಸಿದ್ದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಗೆದ್ದು ಶಾಸಕರಾಗಿದ್ದರು.

RELATED TOPICS:
English summary :BJP

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...