ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು? | ಜನತಾ ನ್ಯೂಸ್

05 Aug 2021
462

ನವದೆಹಲಿ : ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದವಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಪಕ್ಷದ ಶಾಸಕರಾದ ಜಮೀರ್ ಅಹ್ಮದ್ ಅವರ ಮನೆ, ಕಚೇರಿ ಮೇಲಿನ ಇಡಿ ದಾಳಿ ಖಂಡನೀಯ. ಕಾನೂನು ಪ್ರಕಾರ ಅದನ್ನು ಎದುರಿಸಲು ಜಮೀರ್ ಅವರು ಸಮರ್ಥರಿದ್ದಾರೆ. ಎರಡು ವರ್ಷಗಳ ಹಿಂದೆ ಇಡಿ ಅಧಿಕಾರಿಗಳು ಜಮೀರ್ ಅವರಿಗೆ ನೋಟಿಸ್ ಜಾರಿ ಮಾಡಿ ಅವರನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.

ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವುದಾಗಿ ಜಮೀರ್ ಅವರೇ ನನಗೆ ತಿಳಿಸಿದ್ದರು. ಈಗಿನ ಸಂದರ್ಭದಲ್ಲಿ ದಾಳಿ ಅಗತ್ಯ ಇರಲಿಲ್ಲ. ಯಾವ ರೀತಿ ಈ ಕಿರುಕುಳ ನೀಡಲಾಗುತ್ತದೆ ಎಂಬುದು ನನಗೂ ಗೊತ್ತಿದೆ ಎಂದಿದ್ದಾರೆ.

ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಎಸಿಬಿ ನಿಜಕ್ಕೂ ಕಾರ್ಯಪ್ರವೃತ್ತವಾಗಿದ್ದರೆ, ಮಾಜಿ ಸಚಿವ ಶ್ರೀನಿವಾಸಗೌಡರು ವಿಧಾನಸಭೆಯಲ್ಲಿ ಆಪರೇಷನ್ ಕಮಲದ ವಿಚಾರವಾಗಿ ಸಿ.ಪಿ. ಯೋಗೇಶ್ವರ್ ಹಾಗೂ ಅಶ್ವಥ್ ನಾರಾಯಣ ಅವರು 30 ಕೋಟಿ ಹಣದ ಆಮಿಷ ನೀಡಿ, 5 ಕೋಟಿ ಹಣವನ್ನು ನನ್ನ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆರೋಪ ಮಾಡಿದಾಗ ಈ ಇಲಾಖೆಗಳು ಎಲ್ಲಿ ಹೋಗಿದ್ದವು?. ಸಿ.ಪಿ. ಯೋಗೇಶ್ವರ್ ಮನೆ ಮಾರಿ 9 ಕೋಟಿ ಹಣ ಖರ್ಚು ಮಾಡಿ ಸರ್ಕಾರ ರಚನೆ ಮಾಡಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಅವರು ಹೇಳಿದಾಗ ಈ ಇಲಾಖೆಗಳು ಏನಾಗಿದ್ದವು? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಯಾರು ಯಾರ ಅನುಕೂಲಕ್ಕೆ ಹೇಗೆ ಬೇಕೋ, ಹಾಗೆ ಈ ಸಂಸ್ಥೆಗಳು ನಡೆದುಕೊಳ್ಳುತ್ತಿವೆ. ಅಧಿಕಾರ ಇದೆ ಎಂದು ಈ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ವಿಚಾರವಾಗಿ ಕಾನೂನು ರೀತಿಯಲ್ಲಿ ಜಮೀರ್ ಅವರು ಉತ್ತರ ನೀಡಲಿದ್ದಾರೆ.

ಅವರಿಗೆ ಆ ಶಕ್ತಿ ಇದೆ. ಆದರೆ ಕಾಂಗ್ರೆಸ್ ನಾಯಕರಿಗೆ ಒಂದು ಕಾನೂನು, ಬಿಜೆಪಿಯವರಿಗೆ ಇನ್ನೊಂದು ಕಾನೂನು ಎಷ್ಟು ಸರಿ? ಬಿಜೆಪಿಯವರೆಲ್ಲಾ ಬಹಳ ಸಾಚಾತನದಲ್ಲಿ ವ್ಯವಹಾರ ಮಾಡುತ್ತಿದ್ದಾರಾ? ಏಕೆ ಈ ತಾರತಮ್ಯ ಆಗುತ್ತಿದೆ? ಎಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ.

ಇಷ್ಟು ದಿನ ಯಾಕೆ ಸುಮ್ಮನಿದ್ದರು, ಏಳು ಬಾರಿ ಶಾಸಕರಾಗಿದ್ದ ರೋಷನ್ ಬೇಗ್ ಅವರು ಏನಾಗಿದ್ದಾರೆ ಎಂಬ ವಿಚಾರವಾಗಿ ನಾನು ಈಗ ಮಾತನಾಡುವುದಿಲ್ಲ. ನಿರ್ದಿಷ್ಟ ವರ್ಗಕ್ಕೆ ತೊಂದರೆ ನೀಡಲು ಈ ರೀತಿ ದಾಳಿಗಳು ನಡೆಯುತ್ತಿವೆ ಎಂಬುದು ಸ್ಪಷ್ಟವಾಗುತ್ತಿದೆ ಎಂದರು.

RELATED TOPICS:
English summary :DK Shivakumar Condemns ED Raid On Zameer Ahmed

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...