ಆಸ್ತಿ ಗಳಿಕೆ ವಿಚಾರವಾಗಿ ಈ.ಡಿ. ತನಿಖೆ ಆಶ್ಚರ್ಯ ಮೂಡಿಸಿದೆ: ಡಿ.ಕೆ.ಶಿವಕುಮಾರ್ | ಜನತಾ ನ್ಯೂಸ್

06 Aug 2021
513

ಬೆಂಗಳೂರು : ಜಮೀರ್‌ ಅಹಮದ್‌ ಪ್ರಕರಣದಲ್ಲಿ ಆಸ್ತಿ ಗಳಿಕೆ ವಿಚಾರವಾಗಿ ಆದಾಯ ತೆರಿಗೆ ಇಲಾಖೆ ಬದಲು ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದು ಆಶ್ಚರ್ಯ ಮೂಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ದಾಳಿಗೂ ಐಎಂಎ ವಿಚಾರಕ್ಕೂ ಸಂಬಂಧವಿಲ್ಲ. ನನ್ನ ಆಸ್ತಿ ವಿಚಾರವಾಗಿ ಈ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರು ಹೇಳಿದ್ದಾರೆ. ಝಮೀರ್ ಅಹ್ಮದ್ ಖಾನ್ ಅವರು ಹಿಂದೆ ವಿಧಾನಸೌಧದಲ್ಲಿ ಮಾತನಾಡಿ ಐಎಂಎ ಪ್ರಕರಣದಲ್ಲಿ ನಷ್ಟ ಅನುಭವಿಸಿರುವ 40 ಸಾವಿರ ಜನರಿಗೂ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದ್ದರು. ಇದು ನಮ್ಮ ಪಕ್ಷದ ನಿಲುವೂ ಆಗಿದೆ ಎಂದರು.

ಆದಾಯ, ಆಸ್ತಿ ವಿಚಾರವಾಗಿ ಈ.ಡಿ. ಅಧಿಕಾರಿಗಳು ದಾಳಿ ಮಾಡಿರುವುದು ನನಗೆ ಆಶ್ಚರ್ಯ ಮೂಡಿಸಿದೆ. ಆದಾಯ ತೆರಿಗೆ ಇಲಾಖೆಗೆ ಈ ವಿಚಾರದಲ್ಲಿ ದಾಳಿ ಮಾಡುವ ಅಧಿಕಾರ ಇದೆ. ಈ.ಡಿ.ಗೆ ಹಣದ ಅವ್ಯವಹಾರದ ಬಗ್ಗೆ ತನಿಖೆ ಮಾಡುವ ಅಧಿಕಾರ ಇದೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ಇಲಾಖೆಗೆ ಈ ವಿಚಾರದಲ್ಲಿ ದಾಳಿ ಮಾಡುವ ಅಧಿಕಾರ ಇದೆ. ಇಡಿಗೆ ಹಣದ ಅವ್ಯವಹಾರದ ಬಗ್ಗೆ ತನಿಖೆ ಮಾಡುವ ಅಧಿಕಾರ ಇದೆ. ನನಗಿರುವ ಜ್ಞಾನದ ಪ್ರಕಾರ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ಅವರಿಗೆ ಹಣದ ಅವ್ಯವಹಾರ ನಡೆದಿದೆ ಎಂಬ ಮಾಹಿತಿ ಸಿಕ್ಕರೆ ನಂತರ ಜಾರಿ ನಿರ್ದೇಶನಾಲಯ ದಾಳಿ ಮಾಡಿ ವಿಚಾರಣೆ ನಡೆಸಬಹುದು. ಆದರೆ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಏಕಾಏಕಿ ದಾಳಿ ಮಾಡಿರುವುದು ಗೊಂದಲ ಮೂಡಿಸಿದೆ ಎಂದು ಹೇಳಿದರು.

ನನ್ನ ಮನೆ ಮೇಲೂ ಸಿಬಿಐ ದಾಳಿ ಮಾಡಿ ನಂತರ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಸರಕಾರದಿಂದ ಅನುಮತಿ ಪಡೆದು, ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿತು. ಇದೆಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ. ಝಮೀರ್ ಅವರು ಬಿಡುವಾದಾಗ, ನಾನು ಅವರ ಜತೆ ಮಾತಾಡಿ ಮಾಹಿತಿ ಪಡೆಯುತ್ತೇನೆ ಎಂದು ಅವರು ತಿಳಿಸಿದರು.

RELATED TOPICS:
English summary :DK shivakumar

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಶಿಕ್ಷಣ ತರಬೇತಿ ಕೇಂದ್ರಕ್ಕೆ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಎರಡು ವರ್ಷದ ಹಿಂದಷ್ಟೇ ಮನೆ ಕಟ್ಟಿ, ಗಂಡ, ಹೆಂಡತಿ ಹಾಗೂ ಮಗ ಆತ್ಮಹತ್ಯೆ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಮೊಬೈಲ್ ಹುಡುಕಿಸಿ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ! | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ಪಾಕಿಸ್ತಾನದ ISI ಅಧಿಕಾರಿ ಜೊತೆ ಸಂಪರ್ಕ, ಸೇನೆಯ ಮಾಹಿತಿ ರವಾನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ | ಜನತಾ ನ್ಯೂ&#
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ಮಾರ್ಫ್ ಮಾಡಿದ(ನಕಲಿ) ವಿಡಿಯೋ - ಸದಾನಂದಗೌಡ | ಜನತಾ ನ್
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಕಾರು ಖರೀದಿಸಿ ತರುತ್ತಿದ್ದ ವೇಳೆ ಬೆಂಕಿ, ಅದೃಷ್ಟವಶಾತ್ ಮೂವರು ಪಾರು | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್​ ಎಚ್ಚರಿಕೆ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#
ಯುವಕನ ಬರ್ಬರ ಹತ್ಯೆ: ಮೃತದೇಹ ಚರಂಡಿಗೆ ಎಸೆದು ಪರಾರಿ | ಜನತಾ ನ್ಯೂ&#

ನ್ಯೂಸ್ MORE NEWS...