ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ 65 ವರ್ಷದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ವ್ಯಕ್ತಿ ಬಂಧನ | ಜನತಾ ನ್ಯೂಸ್
ಉಡುಪಿ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೃದ್ಧನೊಬ್ಬನನ್ನು ಪೊಕ್ಸೋ ಕಾಯಿಡೆಯಡಿ ಪೊಲೀಸರು ಬಂಧಿಸಿದ್ದಾರೆ.
ಅನಂತ ಸೇರೆಗಾರ್(65) ಬಂಧಿತ ಆರೋಪಿ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.
ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.