ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳ ಬಂಧನ! | ಜನತಾ ನ್ಯೂಸ್

09 Aug 2021
488

ಬೆಂಗಳೂರು : ಖಾಸಗಿ ಶಾಲೆಗಳ ಒಕ್ಕೂಟ ಕಾರ್ಯದರ್ಶಿ (ಕ್ಯಾಮ್ಸ್)​ ಡಿ.ಶಶಿಕುಮಾರ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜುಲೈ 29ರಂದು ಆರೋಪಿಗಳು ಜಾಲಹಳ್ಳಿಯ ಶಶಿಕುಮಾರ್ ಮನೆ ಮುಂದೆ​ ಹರಿತವಾದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಕೊಲೆ‌ ಯತ್ನ ಪ್ರಕರಣ ದಾಖಲಿಸಿಕೊಂಡ ಜಾಲಹಳ್ಳಿ‌‌ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ದಿಲೀಪ್, ಅಭಿಷೇಕ್, ಕಾರ್ತಿಕ್, ಭರತ್ ಹಾಗೂ ಪವನ್ ಎಂಬುವರನ್ನ ಬಂಧಿಸಿದಾರೆ.

ಬಂಧಿತರಿಂದ ಒಂದು ಪಿಸ್ತೂಲ್​, ಮೂರು ಜೀವಂತ ಗುಂಡುಗಳು, ಮಾರಕಾಸ್ತ್ರಗಳು, ಡ್ರ್ಯಾಗರ್​, ಪೆಪ್ಪರ್​ ಸ್ಪ್ರೇ ಬಾಟಲ್ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿಗಳು ವಿವಿಧ ಠಾಣೆಗಳಲ್ಲಿ ರೌಡಿಶೀಟರ್​​ಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಮ್ಸ್ ಕಾರ್ಯದರ್ಶಿಯಾಗಿರುವ ಶಶಿಕುಮಾರ್ ಕಳೆದ ತಿಂಗಳು 29ರ ರಾತ್ರಿ 9 ಗಂಟೆ‌ ಸುಮಾರಿಗೆ ಜಾಲಹಳ್ಳಿ ನಿವಾಸ ಬಳಿ ಕಾರಿನಿಂದ‌ ಇಳಿಯುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಶಶಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.‌ ಕೂಡಲೇ ಕಾರಿನಲ್ಲಿ ಕುಳಿತಕೊಂಡ ಶಶಿಕುಮಾರ್‌ಗೆ ಸಣ್ಣಪುಟ್ಟ ಗಾಯವಾಗಿತ್ತು. ಜೀವ ರಕ್ಷಣೆಗಾಗಿ ತಮ್ಮ ಬಳಿಯಿದ್ದ ಪಿಸ್ತೂಲ್ ತೆಗೆಯುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು.

ಮಾಹಿತಿ ಆಧರಿಸಿ ಸ್ಥಳಕ್ಕೆ‌ ಪೊಲೀಸರು ಬಂದು ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳ‌ ಪತ್ತೆಗಾಗಿ ಎಸಿಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಸಾರಥ್ಯದಲ್ಲಿ ನಾಲ್ಕು ವಿಶೇಷ ತಂಡ ರಚಿಸಿದ್ದರು.

ಪತ್ತೆ ಕಾರ್ಯದ ವೇಳೆ ಆರೋಪಿಗಳ ಸುಳಿವು ಸಿಕ್ಕಿತ್ತು. ಆರು ತಿಂಗಳ ಹಿಂದೆ ಶಶಿಕುಮಾರ್ ಕೊಲೆಗೆ ಆರೋಪಿಗಳು ಸಂಚು ರೂಪಿಸಿದ್ದರು. ಇದಕ್ಕಾಗಿ ಶಶಿಕುಮಾರ್ ಮನೆ ಸಮೀಪದ ಮನೆಯೊಂದರಲ್ಲಿ ಆರೋಪಿಗಳು ಬಾಡಿಗೆಗೆ ಇದ್ದರು ಎಂದು ತಿಳಿದುಬಂದಿದೆ. ಮನೆ ಮೇಳೆ ದಾಳಿ ನಡೆಸಿ, ಕೃತ್ಯಕ್ಕೆ ಬಳಸಿದ್ದ ಒಂದು ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮಚ್ಚು ಮತ್ತು ಲಾಂಗುಗಳು, ಎರಡು ದ್ವಿಚಕ್ರ ವಾಹನ ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದೂ ಹೇಳಿದರು.

RELATED TOPICS:
English summary :Bangalore

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...