ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟ್ಯಾಂಪ್‍ನಂತೆ: ಸಿದ್ದರಾಮಯ್ಯ | ಜನತಾ ನ್ಯೂಸ್

09 Aug 2021
638

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಹೋಗಿ ಇನ್ನೊಬ್ಬರು ಹೊಸ ಮುಖ್ಯಮಂತ್ರಿ ಬಂದಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಕಾರಣ ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟ್ಯಾಂಪ್‍ನಂತೆ. ಈಗ ಕಾಲ ಕೂಡಿ ಬರುತ್ತಿದೆ, ವ್ಯವಸ್ಥೆ ಹದಗೊಳ್ಳುತ್ತಿದೆ. ನಾವೆಲ್ಲಾ ಹೋರಾಟದ ಮನೋಭಾವದಿಂದ, ಒಟ್ಟಾಗಿ ಬಿಜೆಪಿಯನ್ನು ತೊಲಗಿಸಲು ಸಾಧ್ಯ ಎಂದಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ನೆರವೇರಿತು. ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಆರ್.ವಿ.ದೇಶಪಾಂಡೆ, ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಭಾಗಿಯಾಗಿದ್ದರು.

ಸ್ವತಂತ್ರ ಭಾರತದಲ್ಲಿ ಮೋದಿ ಅವರಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ. ಸಾವರ್ಕರ್ ಅವರಿಂದ ಹಿಡಿದು ಭಾರತೀಯ ಜನತಾ ಪಕ್ಷದ ಯಾವೊಬ್ಬ ನಾಯಕನೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ. ತ್ಯಾಗ ಬಲಿದಾನಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ತೊರೆದು ಹೋದವರು ಸೈದ್ಧಾಂತಿಕ ಬದ್ಧತೆಯಿಲ್ಲದವರು. ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ದೇಶದಲ್ಲಿ ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ ಎಂಬುದು ನನ್ನ ಭಾವನೆ. ಕರ್ನಾಟಕದಲ್ಲಿಯೂ ಬಿಜೆಪಿಯನ್ನು ತೊಲಗಿಸಲು ಸ್ವತಂತ್ರವಾಗಿ ಪ್ರಯತ್ನಿಸೋಣ. ಈ ದಿನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸುತ್ತಾ, ಅವರ ತ್ಯಾಗ, ಬಲಿದಾನಗಳನ್ನು ನಮ್ಮ ಎಲ್ಲ ಹೋರಾಟಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ನಾನು ಹುಟ್ಟಿದ್ದೇನೆ. ಸ್ವಾತಂತ್ರ್ಯ ಬಂದಮೇಲೆ ನರೇಂದ್ರ ಮೋದಿ ಹುಟ್ಟಿದ್ದು. ನಾನು ಪ್ರಧಾನಮಂತ್ರಿ ಮೋದಿಗಿಂತ ಸೀನಿಯರ್ ಗೊತ್ತಾ. ಕಾಂಗ್ರೆಸ್ ಪಕ್ಷಕ್ಕೆ 60 ವರ್ಷ ಅಧಿಕಾರ‌ ಕೊಟ್ಟಿದ್ದೀರಾ. ನಮಗೆ 60 ತಿಂಗಳು‌ ಕೊಡಿ ಎಂದು ಮೋದಿ‌ ಹೇಳಿದ್ದರು. 7 ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಜಿಡಿಪಿ ಮೈನಸ್ ಆಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸಾಧನೆ. ಜನರ ಲಿವಿಂಗ್ ಕಾಸ್ಟ್ ಹೆಚ್ಚಿದೆ, ಉದ್ಯೋಗ ಹೋಗಿದೆ. ಹೀಗಾದ್ರೆ ಸಾಮಾನ್ಯ ಜನರು ಹೇಗೆ ಬದುಕಬೇಕು. ಮೋದಿ, ಬಿಜೆಪಿಯವರಷ್ಟು ಸುಳ್ಳುಗಾರರು ಬೇಱರೂ ಇಲ್ಲ. ವಲಸೆ ಹೋದವರೆಲ್ಲ ನಿಜವಾದ ಕಾಂಗ್ರೆಸ್ಸಿಗರಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Siddaramaiah

ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ವಿಚ್ಛೇದನ ಪಡೆದ ಪತ್ನಿಗೆ ಜೀವನಾಂಶ ಹಣ ನೀಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ! | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#

ನ್ಯೂಸ್ MORE NEWS...