ಸಮಸ್ಯೆ ಉದ್ಭವಿಸುತ್ತಲೇ BSY ಮೊರೆ ಹೋದ ಸಿಎಂ | ಜನತಾ ನ್ಯೂಸ್

11 Aug 2021
518

ಬೆಂಗಳೂರು : ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡುವುದಕ್ಕೆ ಅಸಮಾಧಾನಗೊಂಡಿರುವ ಸಚಿವ ಆನಂದ್​ ಸಿಂಗ್​ ರಾಜೀನಾಮೆ ಮುಂದಾಗಿದ್ದಾರೆ.

ಆನಂದ್ ಸಿಂಗ್ ವಿಚಾರವಾಗಿ ಬಿಎಸ್​​ವೈ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮಧ್ಯಪ್ರವೇಶ ಮಾಡಿ ಆನಂದ್ ಸಿಂಗ್ ಮನವೊಲಿಸುವಂತೆ ಮನವಿ ಮಾಡಿದ್ದಾರೆ. ಬಿಎಸ್​ವೈ ಸೂಚನೆಯಂತೆ ಸಚಿವ ಆರ್.ಅಶೋಕ್ ಮತ್ತು ಸಿಂಗ್ ಆಪ್ತರಾದ ಶಾಸಕ ರಾಜುಗೌಡ ಮಾತುಕತೆ ನಡೆಸಿ ಯಡಿಯೂರಪ್ಪ ನೀಡಿರುವ ಸಂದೇಶವನ್ನು ತಲುಪಿಸಿ ಮನವೊಲಿಸಿದ್ದಾರೆ. ಹಾಗಾಗಿಯೇ, ಆನಂದ್ ಸಿಂಗ್ ರಾಜೀನಾಮೆ ನಿರ್ಧಾರಕ್ಕೆ ಬಂದು ನಂತರ ಯೂ ಟರ್ನ್ ಆಗಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಬಳಿ ಆನಂದ್ ಸಿಂಗ್ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಿಮ್ಮ ಆಶೀರ್ವಾದದಿಂದ ನಾನು ಮಂತ್ರಿಯಾದೆ. ವಿಜಯನಗರ ಸಾಮ್ರಾಜ್ಯದ ವೈಭವ ಉಳಿಸಲು, ಪ್ರತ್ಯೇಕ ಜಿಲ್ಲೆ ರಚನೆ ಮಾಡಿ ಘೋಷಣೆ ಮಾಡಿದ್ದೀರ. ಆದ್ರೆ ನಿಮ್ಮ ಅವಧಿಯಲ್ಲಿ ಎರಡು ಬಾರಿ ಸಚಿವ ಸ್ಥಾನ ಬದಲಾವಣೆ ಮಾಡಿದಿರಿ. ಆದರೂ ನಾನು ನಿಮಗಾಗಿ ಏನೂ ಮಾತನಾಡಲಿಲ್ಲ. ಆದರೆ ಈಗ ನನಗೆ ಅನ್ಯಾಯ ಆಗಿದೆ, ಉತ್ತಮ ಖಾತೆಯ ನಿರೀಕ್ಷೆಯಲ್ಲಿದ್ದೆ. ಆದರೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಿದ್ದಾರೆ. ಇದು ನನಗೆ ಬೇಸರ ತರಿಸಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಸಿಎಂ ಬೊಮ್ಮಾಯಿ ಬಳಿ ಹೇಳಿದ್ದೇನೆ, ಅವರು ಸ್ವಲ್ಪ ದಿನ ಕಾಯುವಂತೆ ಹೇಳಿದ್ದಾರೆ ಅಂತ ಬಿಎಸ್​ವೈ ಬಳಿ ಆನಂದ್ ಸಿಂಗ್ ಹೇಳಿದ್ದಾರೆ.

ಯಡಿಯೂರಪ್ಪ ಸೂಚನೆಯಂತೆ ಆನಂದ್ ಸಿಂಗ್‌ಗೆ ಬುಲಾವ್ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಕುಳಿತು ಮಾತನಾಡು ಮೂಲಕ ಅತೃಪ್ತಿ ಶಮನಕ್ಕೆ ಮುಂದಾಗಿದ್ದಾರೆ‌. ಸಿಂಗ್ ಮಾತುಕತೆಗೆ ಒಪ್ಪಿಕೊಳ್ಳದಿದ್ದಲ್ಲಿ ನಂತರ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.

RELATED TOPICS:
English summary :Basavaraj bommai

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...