ನಗರದಲ್ಲಿ ಝೀರೋ ಟ್ರಾಫಿಕ್ ಬೇಡ: ಝೀರೋ ಟ್ರಾಫಿಕ್ ಇಲ್ಲದೇ ಸಂಚರಿಸಿದ ಸಿಎಂ ಬೊಮ್ಮಾಯಿ | ಜನತಾ ನ್ಯೂಸ್

14 Aug 2021
506

ಬೆಂಗಳೂರು : ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿಗಳು ಓಡಾಡುವಾಗ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್‌ಗಳಲ್ಲಿ ವಾಹನ ಸವಾರರು ಹತ್ತಾರು ನಿಮಿಷ ಸುಮ್ಮನೆ ಕಾಯುವಂತಾಗುತ್ತದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿತ್ತು. ಈ ವ್ಯವಸ್ಥೆಗೆ ಮಂಗಳ ಹಾಡಲು ಸಿಎಂ ಬೊಮ್ಮಾಯಿ ನಿರ್ಧರಿಸಿದ್ದಾರೆ.

ತಾವು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ. ಸಿಗ್ನಲ್ ಮುಕ್ತ ಸಂಚಾರ ಇರಿಸಿದರೂ ಸಾಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೆ, ತಾವು ಓಡಾಡುವ ವೇಳೆ ಆಂಬುಲೆನ್ಸ್‌ಗಳ ಸುಗಮ ಓಡಾಟಕ್ಕೆ ಅವಕಾಶ ನೀಡುವಂತೆಯೂ ಆದೇಶಿಸಿದ್ದಾರೆ ಎನ್ನಲಾಗಿತ್ತು.

ಮೌಖಿಕವಾಗಿ ಝೀರೋ ಟ್ರಾಫಿಕ್ ಬೇಡ ಎಂದು ಸಿಎಂ ಬೊಮ್ಮಾಯಿ ಈಗಾಗಲೇ ಸೂಚನೆ ನೀಡಿದ್ದಾರೆ.‌ ಅದರಂತೆ ಇಂದು ಮುಖ್ಯಮಂತ್ರಿ ಪ್ರಯಾಣದ ವೇಳೆ ಜಂಕ್ಷನ್ ಟು‌ ಜಂಕ್ಷನ್ ವಾಹನಗಳ ಕ್ಲಿಯರೆನ್ಸ್​ಗೆ ಸೂಚನೆ ನೀಡಲಾಯಿತು.

ಸಿಎಂ ಹೊಗುವ ಹಾಗೂ ಬರುವ ಮುನ್ನ ವಾಕಿ ಟಾಕಿ ಮೂಲಕ ಸಂಚಾರಿ ಪೊಲೀಸರಿಗೆ ಸಿಗ್ನಲ್​ ಕ್ಲಿಯರೆನ್ಸ್​​​ ಮಾಡುವಂತೆ ಸೂಚನೆ ನೀಡಲಾಯಿತು. ಗೃಹ ಕಚೇರಿ ಕೃಷ್ಣಾದಿಂದಲೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಮಾಡಲಾಯಿತು. ನೈಸ್ ರಸ್ತೆ ಜಂಕ್ಷನ್ ಬಳಿ ಮಾತ್ರ ಸಾರ್ವಜನಿಕರ ವಾಹನಗಳನ್ನು ತಡೆ ಹಿಡಿಯಲಾಯಿತು.

ಸಂಚಾರಿ ಪೋಲೀಸರು ತಮ್ಮ ವಾಕಿ -ಟಾಕಿ ಮೂಲಕ ಸಂದೇಶ ರವಾನಿಸುವ ವೇಳೆ ಇನ್ಮುಂದೆ ನಿಮೋ ವನ್ ಮೂವ್ಮೆಂಟ್ ವೇಳೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರ್ ಇರಲಿ. ಕಂಪ್ಲೀಟ್ ಝೀರೋ ಕ್ಲಿಯರ್ ಇರೋದು ಬೇಡ. ಮೊದಲ ಆ್ಯಂಬುಲೆನ್ಸ್​ ಗೆ ಕೊಡಿ. ಆ್ಯಂಬುಲೆನ್ಸ್ ಸಂಚಾರಕ್ಕೆ ಕ್ಲಿಯರ್ ಆದಮೇಲೆ ಸಿಎಂ ಮೂವ್ಮೆಂಟ್ ಮಾಡಿ ಎಂದು ಸೂಚಿಸಲಾಗಿದೆ ಎನ್ನಲಾಗಿದೆ.

RELATED TOPICS:
English summary :Basavaraj bommai

ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಬಿಎಸ್‌ಎಫ್‌ ಕ್ಯಾಂಪ್​ನ 51 ಯೋಧರಲ್ಲಿ ಕೋವಿಡ್ ಪಾಸಿಟಿವ್​! | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ, ಮಹಿಳೆಯೊಬ್ಬರ ಸಜೀವ ದಹನ | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಭಾರಿ ಅಗೌರವ : 9 ನೌಕರರು ಕೆಲಸದಿಂದ ವಜಾ, 2 ಅಮಾನತು, ಎಫ್ಐಆರ್ ದಾಖಲು | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 252 ಮಂದಿ ಸಾವು! | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರೈತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಅಥವಾ ದೇಶದಲ್ಲಿರುವ ವಿದೇಶಿ ಏಜೆಂಟರೇ ಪ್ರಾಯೋಜಕರು - ಸಿಎಂ ಬೊಮ್ಮಾಯಿ | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#
ರಾಜ್ಯದಲ್ಲಿಂದು 677 ಮಂದಿಗೆ ಕೊರೊನಾ ದೃಢ! | ಜನತಾ ನ್ಯೂ&#

ನ್ಯೂಸ್ MORE NEWS...