Wed,Apr24,2024
ಕನ್ನಡ / English

ಲಾಕ್ ಡೌನ್ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ; ಕೋವಿಡ್ ಸಭೆಯಲ್ಲಿ ಮಹತ್ವದ ನಿರ್ಧಾರ | ಜನತಾ ನ್ಯೂಸ್

14 Aug 2021
2842

ಬೆಂಗಳೂರು : ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದರು.

ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಲಾಕ್ ಡೌನ್ ನಂತಹ ಕಠಿಣ ಕ್ರಮ ಬೇಡ. ಅಗತ್ಯಬಿದ್ದರೆ ಮಾತ್ರ ವಿಕೇಂಡ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಯೋಚಿಸೋಣ ಎಂದಿದ್ದಾರೆ.

ಕೊವಿಡ್ 3ನೇ ಅಲೆ ತಡೆಗಟ್ಟುವ ಕುರಿತ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾವಾರು ಕೊವಿಡ್ ಅಂಕಿಅಂಶಗಳ ಮಾಹಿತಿ ಪಡೆದರು. ಕೊರೊನಾ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಬಹಳ ಎಚ್ಚರಿಕೆಯಿಂದ ಕೊರೊನಾ ನಿಯಂತ್ರಿಸಬೇಕಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ಗಡಿ ಹಳ್ಳಿಗಳಲ್ಲಿ ಸಂಪೂರ್ಣ ಕೊವಿಡ್ ಪರೀಕ್ಷೆ ನಡೆಸಲಾಗುವುದು. ಕೊವಿಡ್ ತಡೆಯಲು ಜಿಲ್ಲಾವಾರು ಯೋಜನೆಗೆ ನಿರ್ಧಾರ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಹಾಸನ, ಬೆಂಗಳೂರು ಗ್ರಾಮೀಣ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಲಸಿಕೆ ವಿತರಣೆ ಇನ್ನೂ ವೇಗ ಪಡೆಯಬೇಕು.

ಪಾಸಿಟಿವಿಟಿ ದರ 2 ಪರ್ಸೆಂಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಓಪನ್ ಮಾಡಬೇಕು. ಪೋಷಕರು ಮತ್ತು ಶಿಕ್ಷಕರು ಕೊರೊನಾ ಲಸಿಕೆ ಪಡೆದಿರಬೇಕು. ಕೊವಿಡ್ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಹೆಚ್ಚಾದರೆ ಒಂದು ವಾರ ಶಾಲೆಯನ್ನು ಮುಚ್ಚಿ, ಸ್ಯಾನಿಟೈಸ್ ಮಾಡ್ತೇವೆ. ಸ್ಯಾನಿಟೈಸ್ ಮಾಡಿ ವಾರದ ಬಳಿಕ ಶಾಲೆ ಆರಂಭಿಸುತ್ತೇವೆ.

ಇದೇ ವೇಳೆ ಎರಡನೇ ಅಲೆಯಲ್ಲಿ ಆದ ಅನಾಹುತ ಮೂರನೇ ಅಲೆಯಲ್ಲಿ ಅಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಯಿತು. ಜೊತೆಗೆ ಆಕ್ಸಿಜನ್ , ಐಸಿಯು ಬೆಡ್, ಆ್ಯಂಬುಲೆನ್ಸ್ , ಕೊರತೆ ಆಗದಂತೆ ಕ್ರಮ ಕೈಗೊಂಡು ಮೂರನೇ ಅಲೆಯ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಜ್ಞರ ಸಮಿತಿ ಎಚ್ಚರಿಕೆ ನೀಡಿದೆ.

ದಿನಗೂಲಿ ನೌಕರರು, ಕೂಲಿ ಕಾರ್ಮಿಕರು, ಆಟೋ, ಓಲಾ, ಊಬರ್, ಹೊಟೆಲ್​ಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ದಿನಗೂಲಿ ಕೆಲಸ ಅವಲಂಬಿತರಿಗೆ ಯಾವುದೇ ತೊಂದರೆಯಾಗಬಾರದು ಎಂದು ಸೂಚನೆ ನೀಡಿದರು ಎನ್ನಲಾಗಿದೆ.

ಹಬ್ಬಗಳ ಸಾಲಿರುವ ಹಿನ್ನಲೆ ಹಬ್ಬದ ದಿನದಲ್ಲಿ ಜನ ಒಂದೇಡೆ ಸೇರದಂತೆ ಎಚ್ಚರವಹಿಸಬೇಕು. ಯಾವುದೇ ರೀತಿ ಜನರಿಗೆ ತೊಂದರೆಯಾಗಬಾರದು.ಹಬ್ಬಗಳ ಆಚರಣೆ ಈ ಹಿಂದಿನ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎನ್ನಲಾಗಿದೆ.

RELATED TOPICS:
English summary :Basavaraj bommai

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...