ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ! | ಜನತಾ ನ್ಯೂಸ್

15 Aug 2021
520

ಬೆಂಗಳೂರು : ದೇಶಾದ್ಯಂತ ಇಂದು 75 ನೇ ವರ್ಷದ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ತೆರೆದ ಜೀಪ್‌ನಲ್ಲಿ ಮುಖ್ಯಮಂತ್ರಿ ಪರೇಡ್ ಪರಿವೀಕ್ಷಣೆ ಮಾಡಿದರು. ಗೌರವ ರಕ್ಷೆ ಸ್ವೀಕಾರ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯವನ್ನು ಕೋರಿದರು.

75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಹಿನ್ನೆಲೆ ವಿಧಾನಸೌಧದ ಮುಂಭಾಗ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವತಂತ್ರ ದಿವಸವನ್ನು ಅರ್ಥಪೂರ್ಣ ವಿಭಿನ್ನವಾಗಿ ಆಚರಿಸಬೇಕೆಂದು ಕಲ್ಪನೆ ಇತ್ತು. ಕೋವಿಡ್ ಹಾಗೂ ಕರ್ಫ್ಯೂ ಇರುವ ಕಾರಣ ಕಾರ್ಯಕ್ರಮ ಮೊಟಕುಗೊಳಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ಅಮೃತ ಮಹೋತ್ಸವದ ವೇಳೆ ಧ್ವಜಾರೋಹಣದ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ. ನನಗೆ ಈ ಅವಕಾಶ ಕೊಟ್ಟವರಿಗೆ ಚಿರಋಣಿಯಾಗಿದ್ದೇನೆ. ಭಾರತ ಯಶಸ್ವಿ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವ ಯಶಸ್ವಿಯಾದ ದೇಶದಲ್ಲಿ ಭಾರತ ದೊಡ್ಡದು.

ಭಾರತ ಏಕತೆ, ಅಖಂಡತೆ, ಸಾರ್ವಭೌಮತ್ವ ಉಳಿಸಿಕೊಂಡು ಪ್ರಜಾಪ್ರಭುತ್ವ ಬಹಳ ಆಳವಾಗಿ ಬೇರೂರಿದೆ. ಡಾ.ಬಿ.ಆರ್.ಅಂಬೇಡ್ಕರ್‌ರ ದೂರ ದೃಷ್ಟಿ, ಸಮಾನತೆ ದೇಶದ ಕಲ್ಯಾಣಕ್ಕೆ ಸಂವಿಧಾನ ನಮಗೆ ಭಗವದ್ಗೀತೆಯಾಗಿದೆ ಎಂದು ಬೊಮ್ಮಾಯಿ ಡಾ.ಬಿ.ಆರ್.ಅಂಬೇಡ್ಕರ್‌ಗೆ ನಮನ ಸಲ್ಲಿಸಿದರು.

ಸ್ವಾತಂತ್ರ್ಯ ಹೋರಾಟ ರೋಚಕವಾಗಿರುವ ಹೋರಾಟ, ತಾತ್ವಿಕ ಹೋರಾಟದ ಹಿನ್ನೆಲೆಯಲ್ಲಿ ಒಂದು ತತ್ವ, ಸ್ವಾಭಿಮಾನ, ಸಾರ್ವಭೌಮತ್ವ ಇಟ್ಟುಕೊಂಡು ಹಿರಿಯರಾದ ಗೋಪಾಲ್ ಕೃಷ್ಣ ಗೋಕುಲೆ, ಬಾಲಗಂಗಾಧರ್ ತಿಲಕ್, ಸುಭಾಸ್ ಚಂದ್ರ ಬೋಸ್, ಚಂದ್ರಶೇಖರ್ ಅಜಾದ್ ಅವರ ತ್ಯಾಗ ಬಲಿದಾನವನ್ನು ಮರೆಯಲು ಸಾಧ್ಯವಿಲ್ಲ ಎಂದರು.

ರಾಣಿ ಚೆನ್ನಮ್ಮ ನಮ್ಮೆಲ್ಲರ ಅಭಿಮಾನದ ಸಂಕೇತ, ರೈತರು ಮತ್ತು ಕಾರ್ಮಿಕರ ಸತ್ಯಾಗ್ರಹ ಸ್ವಾತಂತ್ರ್ಯಕ್ಕೆ ಭದ್ರ ಬುನಾದಿ ಹಾಕಿವೆ. ಆ ರೈತರು, ಕಾರ್ಮಿಕರನ್ನು ಸ್ಮರಿಸುತ್ತೇನೆ. ರಾಯಣ್ಣರ ತ್ಯಾಗ, ಬಲಿದಾನ ಬಹಳ ಮಹತ್ವದ್ದಾಗಿದೆ. ರಾಯಣ್ಣರ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ರಾಯಣ್ಣ ಜನ್ಮದಿನ ಆಚರಿಸುತ್ತಿರುವುದು ನಮಗೆ ಖುಷಿ ತಂದಿದೆ. ಸ್ವಾತಂತ್ರಯಕ್ಕಾಗಿ ಪ್ರಾಣತ್ಯಾಗ ಮಾಡಿದವರಿಗೆ ಭಾವಪೂರ್ಣ, ಭಕ್ತಿ ಪೂರ್ಣ ನಮನ ಎಂದು ಹೇಳಿದರು.

ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭವಾಗಲಿದೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಎಂದು ಘೋಷಣೆ ಮಾಡಿದರು.

ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತನನ್ನು ಕೇಂದ್ರ ಬಿಂದುವಾಗಿ ಅಭಿವೃದ್ಧಿ ಮಾಡಬೇಕು. ರೈತ ಕೇಂದ್ರಿತ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ. ರೈತನ ಶ್ರಮ, ಕೂಲಿಕಾರನ ಬೆವರಿನಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ ಕೊಡಬೇಕು. ಕೃಷಿ ಕ್ಷೇತ್ರದಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ, ಕೈಗಾರಿಕಾ ಕ್ಷೇತ್ರದಲ್ಲಿ ಶೇ.4ರಷ್ಟು ಬೆಳವಣಿಗೆಯಾಗುತ್ತದೆ. ಸೇವಾ ವಲಯದಲ್ಲಿ ಶೇ.10ರಷ್ಟು ಬೆಳವಣಿಗೆಯಾಗುತ್ತದೆ ಎಂದು ತಿಳಿಸಿದರು.

RELATED TOPICS:
English summary :Independence Day

ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ರಾಜಧಾನಿ ಬೆಂಗಳೂರಿನಲ್ಲಿ ಸ್ಪೋಟ : ಕನಿಷ್ಠ 3 ಸಾವು, ಹಲವರಿಗೆ ಗಾಯ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಅಮೇರಿಕ ವಿಮಾನಯಾನದಲ್ಲಿ ಕಚೇರಿ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ : ವೈರಲ್ ಚಿತ್ರ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ಬೆಂಗಳೂರು ಕ್ಯಾಬ್ ಚಾಲಕನ ಮೇಲೆ ಅತ್ಯಾಚಾರ ಆರೋಪ: ಬಂಧನ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ನಮ್ಮ ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ವಿಧಿವಶ! | ಜನತಾ ನ್ಯೂ&#
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಪ್ರಧಾನಿ ಮೋದಿ ಅಮೇರಿಕ ಪ್ರವಾಸ ಆರಂಭ : ಪಾಲ್ಗೊಳ್ಳುವ ಸಭೆಗಳ, ಕಾರ್ಯತಂತ್ರದ ಸಂಪೂರ್ಣ ವಿವರ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಕಳಚಿ ಬಿದ್ದ ತಮ್ಮ ಪಂಚೆ ಬಗ್ಗೆ ಸಭೆಗೆ ತಿಳಿಸಿ, ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ | ಜನತಾ ನ್
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಅಫ್ಘಾನಿಸ್ತಾನದ ಗಡಿ ಪ್ರವೇಶಿಸಿದ ಟ್ರಕ್ ಗಳ ಪಾಕಿಸ್ತಾನದ ಬಾವುಟ ಕಿತ್ತು ಹರಿದ ತಾಲಿಬಾನಿಗಳು | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ, ಲಾಡ್ಜ್‌ನಲ್ಲಿ ಸುರಂಗ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರೈಸ್ತ ಮಷನರಿಗಳಿಂದ ಮತಾಂತರ, ನನ್ನ ತಾಯಿಯನ್ನೇ ಮತಾಂತರ ಮಾಡಿದ್ದಾರೆ! | ಜನತಾ ನ್ಯೂ&#

ನ್ಯೂಸ್ MORE NEWS...